ಕರ್ನಾಟಕ

karnataka

ನೀತಿ ಸಂಹಿತೆ ಎಫೆಕ್ಟ್: ಜಿಲ್ಲಾಡಳಿತಗಳೊಂದಿಗಿನ ಸಿಎಂ ಸಭೆ ಮುಂದೂಡಿಕೆ

By

Published : Nov 19, 2021, 2:36 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದದ ಮೂಲಕ ಎಲ್ಲಾ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಬೇಕಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊನೆಯ ಕ್ಷಣದಲ್ಲಿ ಸಭೆ ರದ್ದುಗೊಂಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ಬೆಳೆ ಹಾನಿ ಹಾಗೂ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಿಸಿದ್ದ ವಿಡಿಯೋ ಸಂವಾದ ರದ್ದಾಗಿದೆ.

ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಕಂದಾಯ ಇಲಾಖೆಯ ಅಧಿಕಾರಿಗಳು‌ ಸೇರಿದಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಲು ಆಗಮಿಸಿದ್ದರು.

ಆದರೆ, ಸಭೆ ನಡೆಸಲು ಚುನಾವಣಾ ಆಯೋಗ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಿಕೆ ಮಾಡಲಾಯಿತು.

ಇದನ್ನೂ ಓದಿ:ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ: ಇಂದು ಜಿಲ್ಲಾಡಳಿತಗಳ ಜೊತೆ ಸಿಎಂ ಸಭೆ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗದ ಅನುಮತಿ ಪಡೆದ ಬಳಿಕ ಸಿಎಂ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ಆಯೋಗಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪತ್ರ ಬರೆದಿದೆ. ಸಂಜೆ 4 ಗಂಟೆ ಸುಮಾರಿಗೆ ಜಿಲ್ಲಾಡಳಿತಗಳ ಜೊತೆ ಸಂವಾದ ನಡೆಯಲಿದೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ABOUT THE AUTHOR

...view details