ಕರ್ನಾಟಕ

karnataka

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನ್ಯಾಯಾಲಯಕ್ಕೆ ಹಾಜರಾದ ಭಗವಾನ್, ಚಂಪಾ ಗೈರು

By

Published : Jan 1, 2022, 4:23 AM IST

ಪೆರಿಯಾರ್ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಎಸ್ ಭಗವಾನ್ ಶ್ರೀರಾಮ ಹಾಗೂ ಮಹಾಭಾರತ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

controversy-speech-on-hindu-religion-writer-bhagavan-presents-before-court
ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನ್ಯಾಯಾಲಯಕ್ಕೆ ಹಾಜರಾದ ಭಗವಾನ್, ಚಂಪಾ ಗೈರು

ಬೆಂಗಳೂರು:ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪ ಪ್ರಕರಣದಲ್ಲಿ ಸಿಲುಕಿರುವ ಲೇಖಕ ಪ್ರೊ.ಕೆ.ಎಸ್ ಭಗವಾನ್ ಶುಕ್ರವಾರ ಪೊಲೀಸ್ ಬಿಗಿ ಭದ್ರತೆ ನಡುವೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸಿದ ಆರೋಪ ಎದುರಿಸುತ್ತಿರುವ ಲೇಖಕರ ವಿರುದ್ಧದ ಪ್ರಕರಣವನ್ನು ನಗರದ 8ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ವೀರನಗೌಡ ಎಸ್. ಪಾಟೀಲ ವಿಚಾರಣೆ ನಡೆಸಿದರು. ಈ ವೇಳೆ ಪ್ರೊ. ಭಗವಾನ್ ಪೊಲೀಸ್ ಬಿಗಿಭದ್ರತೆಯಲ್ಲಿ ನ್ಯಾಯಾಲಯಕ್ಕೆ ಹಾಜರಾದರು. ಚಂದ್ರಶೇಖರ ಪಾಟೀಲ (ಚಂಪಾ) ಹಾಗೂ ತಮಿಳ್ ಸೆಲ್ವಿ ಅವರಿಗೂ ಸಮನ್ಸ್ ಜಾರಿಯಾಗಿತ್ತಾದರೂ ಇಬ್ಬರೂ ಗೈರು ಹಾಜರಾಗಿದ್ದರು.

ಇವರ ವಕೀಲರು ವಿನಾಯಿತಿ ಕೋರಿದ ಕಾರಣದಿಂದ ಆರೋಪಿಗಳೆಲ್ಲರೂ ಹಾಜರದ ನಂತರವೇ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದ ನ್ಯಾಯಾಲಯ ವಿಚಾರಣೆಯನ್ನು 2022ರ ಏಪ್ರಿಲ್ 4ಕ್ಕೆ ಮುಂದೂಡಿತು.

ಪೆರಿಯಾರ್ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಎಸ್ ಭಗವಾನ್, ಪ್ರೊ. ಚಂದ್ರಶೇಖರ್ ಪಾಟೀಲ (ಚಂಪಾ) ಹಾಗೂ ತಮಿಳ್ ಸೆಲ್ವಿ ಅತಿಥಿಗಳಾಗಿ ಭಾಗವಹಿಸಿ ಭಾಷಣ ಮಾಡಿದ್ದರು. ಈ ವೇಳೆ ಶ್ರೀರಾಮ ಹಾಗೂ ಮಹಾಭಾರತ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು.

ದೇವಾಲಯಗಳು ಹಣ ಮಾಡುವ ವ್ಯವಸ್ಥೆ ಸೃಷ್ಟಿಸಿಕೊಂಡಿವೆ. ಭಗವದ್ಗೀತೆ ಓದುವವರು ಭಯೋತ್ಪಾದಕರಾಗಿ ಪರಿವರ್ತನೆಯಾಗುತ್ತಾರೆ. ಉಪನಿಷತ್ತು ಒಂದು ಕೆಟ್ಟ ಗ್ರಂಥ ಎಂದೆಲ್ಲಾ ಮಾತನಾಡಿ, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಶಾಮಸುಂದರ ಭಟ್ ಎಂಬುವವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ 2017ರ ಸೆಪ್ಟೆಂಬರ್ 19ರಂದು ದೂರು ನೀಡಿದ್ದರು.

ಘಟನೆ ನಡೆದ ಸ್ಥಳ ಬೆಂಗಳೂರು ಎಂಬ ಕಾರಣಕ್ಕೆ ಪ್ರಕರಣವನ್ನು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ತನಿಖೆ ನಡೆಸಿದ್ದ ಹೈಗ್ರೌಂಡ್ಸ್ ಠಾಣೆ ಪೊಲೀಸರು 8ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಆಗಮಿಸಿದ್ದ ಪ್ರೊ. ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ನ್ಯಾಯಾಲಯದ ಆವರಣದಲ್ಲಿ ಮಸಿ ಬಳಿದಿದ್ದ ಕಾರಣ ಶುಕ್ರವಾರ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಇದನ್ನೂ ಓದಿ:ಕೊರಗಜ್ಜನ ಕಟ್ಟೆ ಧಾರ್ಮಿಕ ಕ್ಷೇತ್ರಕ್ಕೆ ಮಂಗಳೂರು ಪೊಲೀಸ್​​ ಕಮಿಷನರ್​​ ಭೇಟಿ

ABOUT THE AUTHOR

...view details