ಕರ್ನಾಟಕ

karnataka

ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು

By

Published : May 24, 2022, 3:48 PM IST

ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾಗಿ ಲಕ್ಷ್ಮಣ ಸಂಗಪ್ಪ ಸವದಿ, ಎಸ್. ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ ಹಾಗೂ ಹೇಮಲತಾ ನಾಯಕ ಅವರು ಇಂದು ವಿಧಾನಪರಿಷತ್​ ಚುನಾವಣೆಗೆ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

Four BJP candidates have filed nominations for the Vidhan Sabha elections
ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿಯ ನಾಲ್ವರು ಅಭ್ಯರ್ಥಿಗಳು

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್​ಗೆ ನಡೆಯುತ್ತಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾಗಿ ಲಕ್ಷ್ಮಣ ಸಂಗಪ್ಪ ಸವದಿ, ಎಸ್. ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ ಹಾಗೂ ಹೇಮಲತಾ ನಾಯಕ ಅವರು ಇಂದು ನಾಮಪತ್ರ ಸಲ್ಲಿಸಿದರು. ಕೊಪ್ಪಳದಿಂದ ಹೇಮಲತಾ ನಾಯಕ್ ಅವರು ಆಗಮಿಸುವುದು ತಡವಾಗಿದ್ದರಿಂದ ಇತರ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇದೆ. ಕೊಪ್ಪಳದಿಂದ ರಸ್ತೆ ಮಾರ್ಗವಾಗಿ ಬರುತ್ತಿದ್ದ ಹೇಮಲತಾ ಅವರನ್ನು ತಡವಾಗಬಹುದು ಎಂಬ ಕಾರಣಕ್ಕೆ ತುಮಕೂರಿನಲ್ಲಿ ಹೆಲಿಕಾಪ್ಟರ್​ನಲ್ಲಿ ಏರ್ ಲಿಫ್ಟ್ ಮಾಡಿದರು. ಹಾಗಾಗಿ, ಮಧ್ಯಾಹ್ನ 2.20 ರ ಸುಮಾರಿಗೆ ವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಭಾರತೀಯ ಜನತಾ ಪಕ್ಷದ ಮೊದಲ ಅಭ್ಯರ್ಥಿಯಾಗಿ ಲಕ್ಷ್ಮಣ ಸಂಗಪ್ಪ ಸವದಿ, ಎರಡನೇ ಅಭ್ಯರ್ಥಿಯಾಗಿ ಕೇಶವ ಪ್ರಸಾದ್, ಮೂರನೇ ಅಭ್ಯರ್ಥಿಯಾಗಿ ಛಲವಾದಿ ನಾರಾಯಣಸ್ವಾಮಿ, ನಾಲ್ಕನೇ ಅಭ್ಯರ್ಥಿ ಹೇಮಲತಾ ನಾಯಕ್ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಉಮೇಶ್ ಕತ್ತಿ, ಆರ್​. ಅಶೋಕ, ಸಿ.ಸಿ.ಪಾಟೀಲ್, ಗೋಪಾಲಯ್ಯ, ಶಾಸಕ ಸಂಜೀವ್ ಮಠಂದೂರು, ಸಚಿವ ಶಿವರಾಂ ಹೆಬ್ಬಾರ್, ಶಾಸಕ ನಾರಾಯಣ ಸ್ವಾಮಿ, ಪರಿಷತ್ ಮಾಜಿ ಸದಸ್ಯ ಪ್ರಾಣೇಶ್, ನಿರ್ಮಲಕುಮಾರ್ ಸುರಾನ, ಶಾಸಕ ರವಿ ಸುಬ್ರಹ್ಮಣ್ಯ ಹಾಗೂ ಪಕ್ಷದ ಮುಖಂಡ ಚಂದ್ರಶೇಖರ್ ಪಾಟೀಲ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಕೊನೆ ಕ್ಷಣದಲ್ಲಿ ಸಿಕ್ಕ ಟಿಕೆಟ್ : ಅಭ್ಯರ್ಥಿಗೆ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ

ABOUT THE AUTHOR

...view details