ಕರ್ನಾಟಕ

karnataka

ನೈಋತ್ಯ ಮುಂಗಾರು ತುಸು ಚುರುಕು: ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಸಾಧ್ಯತೆ

By

Published : Jun 25, 2022, 2:07 PM IST

ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

Karnataka rain updates
ಸಾಂದರ್ಭಿಕ ಚಿತ್ರ

ಬೆಂಗಳೂರು: ನೈಋತ್ಯ ಮುಂಗಾರು ತುಸು ಚುರುಗೊಂಡಿದ್ದು, ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂ.26 ರವರೆಗೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಭಾಗದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿಯಲ್ಲಿ ಮಳೆ:ಶನಿವಾರ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

ಇದನ್ನೂ ಓದಿ:ನೈರುತ್ಯ ಮುಂಗಾರು ಕ್ಷೀಣ.. ರಾಜ್ಯದಲ್ಲಿ ಎದುರಾಯ್ತು ಮಳೆ ಕೊರತೆ

ABOUT THE AUTHOR

...view details