ಕರ್ನಾಟಕ

karnataka

1,428 ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿ ನೀಡಲು ವಿಫಲ: ಕಂದಾಯ ಇಲಾಖೆ ವಿರುದ್ಧ ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣ

By

Published : Jun 25, 2022, 8:05 AM IST

1,428 ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿ ನೀಡಲು ವಿಫಲವಾಗಿದ್ದರಿಂದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ದ ನ್ಯಾಯಾಂಗ ನಿಂದನೆ ಆರೋಪ ನಿಗದಿಗೆ ಹೈಕೋರ್ಟ್​ನಿಂದ ಮುಹೂರ್ತ ಫಿಕ್ಸ್ ಮಾಡಿದೆ.

High court contempt case against revenue department, revenue department Failure to give land to cemetery, cemetery land issue in Karnataka, Karnataka high court news, ಕಂದಾಯ ಇಲಾಖೆ ವಿರುದ್ಧ ಹೈಕೋರ್ಟ್ ನಿಂದನೆ ಪ್ರಕರಣ, ಸ್ಮಶಾನಕ್ಕೆ ಭೂಮಿ ನೀಡಲು ಕಂದಾಯ ಇಲಾಖೆ ವಿಫಲ, ಕರ್ನಾಟಕದಲ್ಲಿ ಸ್ಮಶಾನ ಭೂಮಿ ಸಮಸ್ಯೆ, ಕರ್ನಾಟಕ ಹೈಕೋರ್ಟ್ ಸುದ್ದಿ,
1,428 ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿ ನೀಡಲು ವಿಫಲ

ಬೆಂಗಳೂರು:ನ್ಯಾಯಾಲಯದ ಕಟ್ಟುನಿಟ್ಟಿನ ಆದೆಶದ ನಡುವೆಯೂ ಶವ ಸಂಸ್ಕಾರಕ್ಕೆ ನಿರ್ದಿಷ್ಟ ಜಾಗವಿಲ್ಲದೇ ತೊಂದರೆ ಎದುರಿಸುತ್ತಿದ್ದ ಗ್ರಾಮ ಮತ್ತು ಪಟ್ಟಣಗಳಲ್ಲಿ ಸ್ಮಶಾನಕ್ಕೆ ಭೂಮಿ ಒದಗಿಸದಿರುವ ಪ್ರಕರಣದಲ್ಲಿ ರಾಜ್ಯ ಸರ್ಕಾರ ವಿರುದ್ಧ ಹೈಕೋರ್ಟ್​ ಗರಂ ಆಗಿದೆ. ಹೀಗಾಗಿ ರಾಜ್ಯ ಸರ್ಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ಈ ತಿಂಗಳ 30ರಂದು ನ್ಯಾಯಾಂಗ ನಿಂದನೆ ಆರೋಪ ನಿಗದಿಪಡಿಸುವ ಪ್ರಕ್ರಿಯೆ ಆರಂಭಿಸುವ ನಿರ್ಧಾರವನ್ನು ಹೈಕೋರ್ಟ್ ವ್ಯಕ್ತಪಡಿಸಿದೆ.

ಬೆಂಗಳೂರು ನಿವಾಸಿ ಮಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠವು ಕಂದಾಯ ಇಲಾಖೆ ಸ್ಮಶಾನಕ್ಕೆ ಸೂಕ್ತ ಜಾಗ ನೀಡದಿರುವ ಕ್ರಮಕ್ಕೆ ಅತೃಪ್ತಿ ವ್ಯಕ್ತಪಡಿಸಿದೆ.

ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ವಿವರವಾದ ಮೆಮೊ ಸಲ್ಲಿಸಿ, ರಾಜ್ಯದಲ್ಲಿ ಒಟ್ಟು 29,076 ಗ್ರಾಮಗಳಿವೆ. ಅವುಗಳಲ್ಲಿ ಒಟ್ಟು 27,648 ಗ್ರಾಮಗಳಿಗೆ ಮತ್ತು 299 ಪಟ್ಟಣಗಳಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಲಾಗಿದೆ. ಇನ್ನೂ 1,428 ಗ್ರಾಮಗಳಿಗೆ ಮತ್ತು ಶಿವಮೊಗ್ಗ ಜಿಲ್ಲೆಯ ಒಂದು ಪಟ್ಟಣದಲ್ಲಿ ಸ್ಮಶಾನಕ್ಕೆ ಜಾಗ ನೀಡಬೇಕಿದೆ. ಅದಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ ಜಮೀನಿನ ಅಗತ್ಯವಿದೆ ಎಂದು ಜಾಗ ನೀಡಲು ಕಂದಾಯ ಇಲಾಖೆಗೆ ಇರುವ ತೊಂದರೆಗಳನ್ನು ಕೋರ್ಟ್ ಗಮನಕ್ಕೆ ತಂದರು.

ಓದಿ:ಸರ್ಕಾರಿ ಉದ್ಯೋಗಾಂಕ್ಷಿಗಳು ಶುದ್ಧ ಹಸ್ತರಾಗಿರಬೇಕು: ಹೈಕೋರ್ಟ್

ಸರ್ಕಾರಿ ಜಮೀನಿನ ಕೊರತೆ:ಹಲವಾರು ಕಡೆ ಸ್ಮಶಾನಕ್ಕೆ ಜಾಗ ಒದಗಿಸಲು ಸರ್ಕಾರಿ ಜಮೀನು ಲಭ್ಯವಿಲ್ಲ. ಹಾಗಾಗಿ ಖಾಸಗಿಯವರ ಜಮೀನು ಖರೀದಿಸಲು ಸರ್ಕಾರ ಯೋಜನೆ ರೂಪಿಸಿದೆ. ಆದರೆ, ಸ್ಮಶಾನಕ್ಕೆ ತಮ್ಮ ಭೂಮಿ ನೀಡಲು ಜನ ಮುಂದೆ ಬರುತ್ತಿಲ್ಲ. ಪ್ರತಿಯೊಂದು ಹಳ್ಳಿಯಲ್ಲೂ ವಿವಿಧ ಧರ್ಮ-ಜಾತಿಯ ಜನರು ತಮ್ಮದೇ ಆದ ವಿಭಿನ್ನ ಆಚರಣೆ ಮತ್ತು ಸಂಪ್ರದಾಯ ಹೊಂದಿದ್ದಾರೆ. ಇದರಿಂದ ಸ್ಮಶಾನಕ್ಕೆ ಜಾಗ ಒದಗಿಸಲು ಕಷ್ಟವಾಗಿದೆ. ಎರಡು ವರ್ಷ ಕಾಲಾವಕಾಶ ನೀಡಿದರೆ 1,428 ಗ್ರಾಮಗಳಿಗೆ ಮತ್ತು ಒಂದು ಪಟ್ಟಣದಲ್ಲಿ ಸ್ಮಶಾನಕ್ಕೆ ಜಾಗ ಒದಗಿಸಲಾಗುವುದು ಎಂದು ಸರ್ಕಾರಿ ವಕೀಲರು ಕೋರ್ಟ್​ಗೆ ಕೋರಿದರು.

ಈ ಕೋರಿಕೆಗೆ ಒಪ್ಪದ ವಿಭಾಗೀಯ ಪೀಠವು, ರಾಜ್ಯದ ಎಲ್ಲಾ ಗ್ರಾಮಗಳಿಗೂ ಸ್ಮಶಾನ ಒದಗಿಸಲು ಸರ್ಕಾರ ಈಗ ಎರಡು ವರ್ಷ ಕಾಲಾವಕಾಶ ಕೋರಿದೆ. ಆದರೆ, ಏಕ ಸದಸ್ಯ ಪೀಠವು ಆದೇಶ ಹೊರಡಿಸಿಯೇ ಮೂರು ವರ್ಷ ಕಳೆದಿವೆ. ಆದರೂ ಹೈಕೋರ್ಟ್ ಆದೇಶವನ್ನು ಇಲ್ಲಿಯವರೆಗೆ ಪಾಲಿಸಿಲ್ಲ. ಸರ್ಕಾರ ಈಗಲೂ ಕಣ್ತೆರೆದಿಲ್ಲ. ಹೈಕೋರ್ಟ್ ಮೌನವಾಗಿದ್ರೆ, ಸರ್ಕಾರ 20 ವರ್ಷವರೆಗೆ ಸಮಯ ಕೇಳುತ್ತದೆ. ಹಾಗಾಗಿ ಮುಂದಿನ ವಿಚಾರಣೆ ವೇಳೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದಡಿ ಆರೋಪ ನಿಗದಿಪಡಿಸಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು ಜೂನ್‌ 30ಕ್ಕೆ ಮುಂದೂಡಿದೆ.

ಕಳೆದ ಜೂನ್‌ 9ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯವು ರಾಜ್ಯದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನ ಜಾಗವಿಲ್ಲದ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಗೆ ಅಗತ್ಯ ಜಮೀನು ಒದಗಿಸುವಂತೆ ಸೂಚಿಸಿತ್ತು. ಈ ಹಿಂದೆ 2019ರ ಆಗಸ್ಟ್‌ 20ರಂದು ಹೈಕೋರ್ಟ್ ಏಕ ಸದಸ್ಯ ಪೀಠವು ನೀಡಿದ ಆದೇಶವನ್ನು 15 ದಿನಗಳ ಒಳಗೆ ಪಾಲಿಸಬೇಕು. ತಪ್ಪಿದರೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ನಿಗದಿಪಡಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.

ABOUT THE AUTHOR

...view details