ಕರ್ನಾಟಕ

karnataka

ಹಾವೇರಿಯ ನೆಲವಾಗಿಲು ಗ್ರಾಮ ಸ್ಥಳಾಂತರ: ಸೂಕ್ತ ಕ್ರಮಕ್ಕೆ ಹೈಕೋರ್ಟ್ ಆದೇಶ

By

Published : Apr 1, 2022, 8:16 AM IST

ಹಾವೇರಿಯ ನೆಲವಾಗಿಲು ಗ್ರಾಮ ಸ್ಥಳಾಂತರ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

High Court notice to Govt over Nelavagilu village relocation issue, Nelavagilu village relocation case in High court, Karnataka High court news, ನೆಲವಾಗಿಲು ಗ್ರಾಮ ಸ್ಥಳಾಂತರ ವಿಚಾರವಾಗಿ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​, ಹೈಕೋರ್ಟ್​ನಲ್ಲಿ ನೆಲವಾಗಿಲು ಗ್ರಾಮ ಸ್ಥಳಾಂತರ ವಿವಾದ, ಕರ್ನಾಟಕ ಹೈಕೋರ್ಟ್​ ಸುದ್ದಿ,
ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು:ಹಾವೇರಿ ಜಿಲ್ಲೆಯ ನೆಲವಾಗಿಲು ಗ್ರಾಮವನ್ನು ಪಕ್ಕದ ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸುವ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ನೆಲವಾಗಿಲು ಗ್ರಾಮವನ್ನು ಕೊಡಿಯಾಲ ಗ್ರಾಮಕ್ಕೆ ಸ್ಥಳಾಂತರಿಸಲು ಕೋರಿ ರೇಣುಕಾ ಸೇರಿದಂತೆ ಗ್ರಾಮದ 35 ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಇದನ್ನೂ ಓದಿ:ಕಬ್ಬಿಣದ ಮೊಳೆಗಳ ಮೇಲೆ ಬರಿಗಾಲಲ್ಲೇ ಕೂಚಿಪುಡಿ ನೃತ್ಯ​!​: ವಿಶ್ವದಾಖಲೆ ಬರೆದ ಉಪನ್ಯಾಸಕಿ

ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಪೀಠ, ಅರ್ಜಿದಾರರು ತಮ್ಮ ಕುಂದುಕೊರತೆ ಕುರಿತು ಸರ್ಕಾರಕ್ಕೆ ಹೊಸದಾಗಿ ಮನವಿ ಪತ್ರ ಸಲ್ಲಿಸಬೇಕು. ಮನವಿ ಪತ್ರ ಸಲ್ಲಿಸಿದ ದಿನದಿಂದ ಮುಂದಿನ ಮೂರು ತಿಂಗಳ ಒಳಗೆ ಸರ್ಕಾರವು ಅರ್ಜಿದಾರರ ಕುಂದುಕೊರತೆ ಆಲಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ಇದನ್ನೂ ಓದಿ:ಐಪಿಎಲ್‌ನಲ್ಲಿಂದು ಪಂಜಾಬ್​​​​-ಕೋಲ್ಕತ್ತಾ ಫೈಟ್‌: ಗೆಲುವಿನ ಉತ್ಸಾಹದಲ್ಲಿ ಮಯಾಂಕ್​​-ಶ್ರೇಯಸ್​

ಪಾಲಿ ಫೈಬರ್ ಕಂಪನಿಯಿಂದ ಪರಿಸರ ಮಾಲಿನ್ಯ ಉಂಟಾದ ಹಿನ್ನೆಲೆಯಲ್ಲಿ ನೆಲವಾಗಿಲು ಗ್ರಾಮಸ್ಥರಿಗೆ ಕೊಡಿಯಾಲ ಗ್ರಾಮದಲ್ಲಿ ಪುನರ್ವಸತಿ ಕಲ್ಪಿಸಲು ಸರ್ಕಾರ ಯೋಜನೆ ರೂಪಿಸಿತ್ತು. ಅದರಂತೆ ಪಕ್ಕದ ಗ್ರಾಮ ಕೊಡಿಯಾಲದಲ್ಲಿ ಒಟ್ಟು 432 ಮನೆಗಳನ್ನು ನಿರ್ಮಿಸಲು 1993ರಲ್ಲಿ ಸರ್ಕಾರ ಆದೇಶ ಹೊರಡಿಸಿತ್ತು. ಗ್ರಾಮ ಸ್ಥಳಾಂತರಕ್ಕೆ ಕಂಪನಿಯೂ ಹಣ ನೀಡಿತ್ತು. ಆದರೆ, ಸರ್ಕಾರ ಗ್ರಾಮ ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳದ ಕಾರಣ ಗ್ರಾಮಸ್ಥರು ಹೈಕೋರ್ಟ್ ಮೆಟ್ಟಿಲೇರಿದ್ದರು.

ABOUT THE AUTHOR

...view details