ಕರ್ನಾಟಕ

karnataka

ಸಿಎಂ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ: ಶಿವಮೊಗ್ಗ ಘಟನೆ ತನಿಖಾ ಪ್ರಗತಿ ಕುರಿತು ಚರ್ಚೆ

By

Published : Feb 24, 2022, 10:17 AM IST

ಆರ್.​​ಟಿ.ನಗರದಲ್ಲಿರುವ ಮುಖ್ಯಮಂತ್ರಿಗಳ ಖಾಸಗಿ ನಿವಾಸದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿಎಂ ಬೊಮ್ಮಾಯಿ ಭೇಟಿಯಾಗಿ, ಶಿವಮೊಗ್ಗ ಘಟನೆಯ ಬಗ್ಗೆ ಚರ್ಚಿಸಿದರು. ಇಂದು ಶಿವಮೊಗ್ಗಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಯುವಕನ ಹತ್ಯೆ ಪ್ರಕರಣದ ಕುರಿತು ಮಾತುಕತೆ ನಡೆಸಿದ್ದಾರೆ.

ಸಿಎಂ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ
ಸಿಎಂ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು:ಶಿವಮೊಗ್ಗ ಯುವಕನ ಹತ್ಯೆ ಪ್ರಕರಣದ ತನಿಖೆ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಮಗ್ರ ಮಾಹಿತಿ ನೀಡಿದ್ದು, ತವರು ಜಿಲ್ಲೆಗೆ ತೆರಳುವ ಮುನ್ನ ಅಗತ್ಯ ಸಲಹೆ ಸೂಚನೆಗಳನ್ನು ಪಡೆದುಕೊಂಡರು.

ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದ್ದು, ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ರಾಜ್ಯ ಪೊಲೀಸ್ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸದ್ಯ ಶಿವಮೊಗ್ಗದಲ್ಲಿ ಶನಿವಾರದವರೆಗೂ ಕರ್ಫ್ಯೂ ಮುಂದುವರೆಸಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಮಾಹಿತಿಯನ್ನು ನೀಡಿದರು. ಪರಿಸ್ಥಿತಿ ನಿಯಂತ್ರಣ ಕುರಿತು ಮುಖ್ಯಮಂತ್ರಿಗಳಿಂದ ಕೆಲವೊಂದು ಸಲಹೆ ಸೂಚನೆಗಳನ್ನು ಗೃಹ ಸಚಿವರು ಪಡೆದುಕೊಂಡರು.

ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿಗಳ ಜೊತೆ ಶಿವಮೊಗ್ಗ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇನೆ, ಬಜೆಟ್ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಮಾತನಾಡಿದ್ದೇನೆ, ಹಾಗೆಯೇ ಬಜೆಟ್‌ನಲ್ಲಿ ಪೊಲೀಸರ ಸವಲತ್ತು ಬಗ್ಗೆ ಕೂಡ ಚರ್ಚೆ ನಡೆಸಲಾಗಿದೆ. ಹಿಂದಿನ ಬಜೆಟ್‌ನಲ್ಲಿ ಸಾಕಷ್ಟು ಹಣ ಕೊಟ್ಟಿದ್ದಾರೆ, ಬಂಧಿಖಾನೆ ಅಭಿವೃದ್ಧಿ, ವಿಧಿ ವಿಜ್ಞಾನ ಪ್ರಯೋಗಾಲಯ ಅಭಿವೃದ್ಧಿಗೆ ಹಣ ನೀಡಬೇಕೆಂದು ಕೇಳಿದ್ದೇನೆ‌ ಎಂದರು.

ಶಿವಮೊಗ್ಗದಲ್ಲಿ ಪೊಲೀಸರ ವೈಫಲ್ಯ ಏನೂ ಇಲ್ಲ. ಇವತ್ತು ರಮಣಗುಪ್ತ ಅವರು ಶಿವಮೊಗ್ಗಕ್ಕೆ‌ ತೆರಳುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡಲು ಅವರನ್ನು ಅಲ್ಲಿಗೆ ಕಳುಹಿಸುತ್ತಿದ್ದೇವೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಪ್ರಕರಣ ವಿಚಾರಣೆಯ ಹಂತದಲ್ಲಿ ಇರುವುದರಿಂದ ಎಲ್ಲವನ್ನೂ ಮಾಧ್ಯಮಗಳ ಮುಂದೆ ವಿಸ್ತೃತವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಎಲ್ಲ ಹಂತದಲ್ಲೂ ತನಿಖೆ ಆಗುತ್ತಿದೆ. ಏನೇನು ಕ್ರಮದ ಅಗತ್ಯತೆ ಇದೆಯೋ ಅದನ್ನೆಲ್ಲಾ ಪೊಲೀಸರು ತಗೆದುಕೊಳ್ಳುತ್ತಿದ್ದಾರೆ. ಸದ್ಯಕ್ಕಂತೂ ಬೇರೆ ಆಲೋಚನೆ ಯಾವುದು ಇಲ್ಲ ಎಂದು ವಹಿಸುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್!

TAGGED:

ABOUT THE AUTHOR

...view details