ಕರ್ನಾಟಕ

karnataka

ರಾಜ್ಯದಲ್ಲಿ 2 ಲಕ್ಷ ದಾಟಿದ ಕೊರೊನಾ ಪಾಸಿಟಿವ್: ಸಚಿವ ಶ್ರೀರಾಮುಲು ಆರೋಗ್ಯದಲ್ಲಿ ಚೇತರಿಕೆ

By

Published : Aug 13, 2020, 9:40 PM IST

ರಾಜ್ಯದಲ್ಲಿ ಇಂದು 6706 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಪಾಸಿಟಿವ್​​ ಪ್ರಕರಣಗಳ ಸಂಖ್ಯೆ 2,03,200 ಕ್ಕೆ ಏರಿಕೆಯಾಗಿದೆ. ಸರ್ಕಾರಿ ಆಸ್ಪತ್ರೆ ಬೌರಿಂಗ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

karnataka-corona-virus-cases-reports
ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದಿಗೆ ಎರಡು ಲಕ್ಷ ದಾಟಿದೆ. ಇಂದು 6,706 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 2,03,200 ಕ್ಕೆ ಏರಿಕೆಯಾಗಿದೆ.

ಇಂದು ಗುಣಮುಖರಾದವರ ಸಂಖ್ಯೆಯಲ್ಲೂ ಏರಿಕೆ ಕಂಡಿದ್ದು, 6706 ಮಂದಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 1,21,242 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಐಸಿಯುನಲ್ಲಿ 727 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 27,296 ರ್ಯಾಪಿಡ್ ಆಂಟಿಜನ್ ಟೆಸ್ಟ್ ಹಾಗೂ 28,703 ಆರ್ ಟಿಪಿಸಿಆರ್ ಟೆಸ್ಟ್ ಸೇರಿದಂತೆ ಒಟ್ಟು 55,999 ಟೆಸ್ಟ್ ನಡೆಸಲಾಗಿದೆ.

ಆರೋಗ್ಯ ಸಚಿವ ಶ್ರೀರಾಮುಲು ಚೇತರಿಕೆ

ರಾಜ್ಯ ಆರೋಗ್ಯ ಸಚಿವ, ಶ್ರೀರಾಮುಲು ನಗರದ ಸರ್ಕಾರಿ ಆಸ್ಪತ್ರೆ ಬೌರಿಂಗ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಸಚಿವರು ಲವಲವಿಕೆಯಿಂದ ಇದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ತಜ್ಞ ವೈದ್ಯರ ಸಮಿತಿಯಿಂದ ಆರೋಗ್ಯದ ಕಾಳಜಿ ವಹಿಸಲಾಗುತ್ತಿದೆ.

ABOUT THE AUTHOR

...view details