ಕರ್ನಾಟಕ

karnataka

ರಫ್ತು ಸನ್ನದ್ಧತೆ ಶ್ರೇಯಾಂಕ ಬಿಡುಗಡೆ: ಕರ್ನಾಟಕಕ್ಕೆ 3ನೇ ಸ್ಥಾನ

By

Published : Mar 26, 2022, 7:34 AM IST

Basavaraj Bommai

ನೀತಿ ಆಯೋಗವು 2021ರ ರಫ್ತು ಸನ್ನದ್ಧತೆ ಸೂಚ್ಯಂಕ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ 3 ನೇ ಸ್ಥಾನ ಪಡೆದುಕೊಂಡಿದೆ. ಗುಜರಾತ್, ಮಹಾರಾಷ್ಟ್ರ ಮೊದಲ ಹಾಗೂ ಎರಡನೇ ಸ್ಥಾನಗಳಲ್ಲಿದೆ.

ಬೆಂಗಳೂರು: ನೀತಿ ಆಯೋಗವು 2021ರ ರಫ್ತು ಸನ್ನದ್ಧತೆ ಸೂಚ್ಯಂಕ ಬಿಡುಗಡೆ ಮಾಡಿದ್ದು, ಕರ್ನಾಟಕ 3 ನೇ ಸ್ಥಾನ ಪಡೆದುಕೊಂಡಿದೆ. ಈ ಹಿಂದಿನ ರಫ್ತು ಸನ್ನದ್ಧತೆ ಸೂಚ್ಯಂಕದಲ್ಲಿ 9 ಸ್ಥಾನದಲ್ಲಿದ್ದ ಕರ್ನಾಟಕ ಈ ಬಾರಿ 3 ಸ್ಥಾನಕ್ಕೇರಿರುವುದು ವಿಶೇಷವಾಗಿದೆ.

ರಫ್ತು ಸನ್ನದ್ಧತೆ ಸೂಚ್ಯಂಕವು ರಾಜ್ಯಗಳ ರಫ್ತು ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ಸನ್ನದ್ಧತೆಯನ್ನು ನಿರ್ಣಯಿಸುತ್ತದೆ. ಗುಜರಾತ್, ಮಹಾರಾಷ್ಟ್ರ ಮೊದಲ ಹಾಗೂ ಎರಡನೇ ಸ್ಥಾನಗಳಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ತಮಿಳುನಾಡು, ಹರಿಯಾಣ ನಂತರದ ಸ್ಥಾನಗಳಲ್ಲಿವೆ.

ರಫ್ತು ಸನ್ನದ್ಧತೆ ಶ್ರೇಯಾಂಕ ಪಟ್ಟಿ

ಇನ್‌ಸ್ಟಿಟ್ಯೂಟ್ ಆಫ್ ಕಾಂಪಿಟಿಟಿವ್ನೆಸ್‌ ಸಹಭಾಗಿತ್ವದಲ್ಲಿ ಸಿದ್ಧಪಡಿಸಲಾದ ಸೂಚ್ಯಂಕವನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇತರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸೂಚ್ಯಂಕದೊಂದಿಗೆ ಹೋಲಿಸಿಕೊಂಡು ತಮ್ಮ ಕಾರ್ಯಕ್ಷಮತೆ ತಿಳಿಯಲು ಮಾನದಂಡವಾಗಿಸಲು ಬಳಸಬಹುದು ಎಂದು ನೀತಿ ಆಯೋಗದ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:ಕೆಎಎಸ್ ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣ: ಇಡಿಯಿಂದಲೂ ತನಿಖೆ ಸಾಧ್ಯತೆ

ABOUT THE AUTHOR

...view details