ಕರ್ನಾಟಕ

karnataka

ಕಸಾಪ ಗೌರವ ಕಾರ್ಯದರ್ಶಿಯಾಗಿ ಮಹಾಲಿಂಗಯ್ಯ ನೇಮಕ

By

Published : Aug 17, 2022, 9:43 PM IST

ಕೆ.ಮಹಾಲಿಂಗಯ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

KN_BNG_08_KASAPA_NEW_HONARARY_SECRETARY_MAHALINGIAHA_7210969
ಕಸಾಪ ಕಾರ್ಯದರ್ಶಿಯಾಗಿ ಮಹಾಲಿಂಗಯ್ಯ ನೇಮಕ

ಬೆಂಗಳೂರು: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿಗೆ ಕೆ.ಮಹಾಲಿಂಗಯ್ಯರನ್ನು ಗೌರವ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕನ್ನಡಪರ ಸಂಘಟಕರು ಹಾಗೂ ಪರಿಷತ್ತಿನ ಹಿತೈಷಿಗಳೂ ಆದ ಕೆ.ಮಹಾಲಿಂಗಯ್ಯರಿಗೆ ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಮಹತ್ವದ ಜವಾಬ್ದಾರಿ ನೀಡಿದ್ದಾರೆ ಎಂದು ಎಂದು ಕಸಾಪ ಪ್ರಕಟಣೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವುಗಳ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಗಾಗಿ ಶ್ರಮಿಸುತ್ತಿರುವ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ ಸಂಖ್ಯೆ 9(2)ರ ಅಡಿಯಲ್ಲಿ ಕೆ.ಮಹಾಲಿಂಗಯ್ಯ ಗೌರವ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ:ನಿರಾಣಿ ಮುಂದಿನ ಮುಖ್ಯಮಂತ್ರಿಯಂತೆ, ಪೋಸ್ಟರ್‌ ವೈರಲ್‌

ABOUT THE AUTHOR

...view details