ಕರ್ನಾಟಕ

karnataka

ಆರೋಗ್ಯಸೌಧದಲ್ಲಿ ಮಾಸ್ಕ್​ ಕಡ್ಡಾಯ, ಧರಿಸದಿದ್ದರೆ 250 ರೂ. ದಂಡ

By

Published : Aug 12, 2022, 7:46 AM IST

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳ ಆರೋಗ್ಯ ಸೌಧಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

Randeep
ರಣದೀಪ್

ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭೇಟಿ ನೀಡುವ ಸಾರ್ವಜನಿಕರು ಸೇರಿದಂತೆ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ. ರಣದೀಪ್ ಸುತ್ತೋಲೆ ಹೊರಡಿಸಿದ್ದಾರೆ.

ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆ ಸುತ್ತೋಲೆ

ಆರೋಗ್ಯ ಸೌಧದ (ಅರೋಗ್ಯ ಇಲಾಖೆಯ ಕೇಂದ್ರ ಕಚೇರಿ) ಆವರಣ ಹಾಗೂ ಕಚೇರಿಯಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು ಎಂದು ಉಲ್ಲೇಖಿಸಿದ್ದಾರೆ. ಈ ನಿಯಮದ ಕುರಿತು ಆರೋಗ್ಯ ಸೌಧದ ಮುಖ್ಯ ಇಂಜಿನಿಯರ್ ಎಲ್ಲ ಹೌಸ್ ಕೀಪಿಂಗ್ ವಿಭಾಗದವರಿಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ:ಕೊರೊನಾ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್​ ಕಡ್ಡಾಯ

ABOUT THE AUTHOR

...view details