ಕರ್ನಾಟಕ

karnataka

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: ಯೆಲ್ಲೋ ಅಲರ್ಟ್ ಘೋಷಣೆ

By

Published : Nov 11, 2021, 3:48 PM IST

ಬೆಂಗಳೂರಿನಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದ್ದು ಹವಾಮಾನ ಇಲಾಖೆ (Meteorology Department) ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

Bangalore
ಬೆಂಗಳೂರು

ಬೆಂಗಳೂರು:ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯರಾತ್ರಿಯಿಂದ ತುಂತುರು ಮಳೆ ಪ್ರಾರಂಭವಾಗಿದ್ದು, ಗುರುವಾರ ಮಧ್ಯಾಹ್ನದವರೆಗೂ ಮುಂದುವರೆದಿದೆ. ಸದ್ಯ ಹವಾಮಾನ ಇಲಾಖೆ ನಗರದಲ್ಲಿ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ.

ನಗರದ ಮಲ್ಲೇಶ್ವರ, ರಾಜಾಜಿನಗರ, ಕುರುಬರಹಳ್ಳಿ, ಯಲಹಂಕ, ಕೋರಮಂಗಲ, ಇಂದಿರಾ ನಗರ, ಸದಾಶಿವ ನಗರ, ಶ್ರೀರಾಂಪುರ ಮುಂತಾದ ಕಡೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಟಿಜಿಟಿ ಮಳೆಯಿಂದಾಗಿ ವಾಹನ ಸವಾರರು, ಬೀದಿಬದಿ ವ್ಯಾಪಾರಸ್ಥರು ಹೈರಾಣಾಗಿದ್ದಾರೆ.

ಗುಂಡಿಗಳಲ್ಲಿ ನೀರು ತುಂಬಿ ಕೆಲವೆಡೆ ಮನೆಗಳಿಗೆ ನೀರು ನುಗ್ಗಿ, ಮರ ಬಿದ್ದಿರುವುದು ವರದಿಯಾಗಿದೆ. ಪಾಲಿಕೆ ಅಧಿಕಾರಿಗಳು/ಸಿಬ್ಬಂದಿ, ಸಂಚಾರಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ರಸ್ತೆಗಿಳಿದು ನೀರು ಹೊರ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದುವರೆಯಲಿರುವ ಮಳೆ:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ (Low-Pressure area in Bay of Bengal) ಪರಿಣಾಮ ಬೆಂಗಳೂರಿನಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಚಳಿ ಗಾಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ತಜ್ಞರು ತಿಳಿಸಿದ್ದಾರೆ.

ಇದನ್ನೂ ಓದಿ:VIDEO: ಚೆನ್ನೈನಲ್ಲಿ ಮುಂದುವರಿದ ಮಳೆಯಾರ್ಭಟ.. ತಗ್ಗು ಪ್ರದೇಶಗಳು ಜಲಾವೃತ

ABOUT THE AUTHOR

...view details