ಕರ್ನಾಟಕ

karnataka

ಮುಂದುವರಿದ ಮಳೆ: ಬೆಂಗಳೂರಿನಲ್ಲಿ 2 ದಿನ ಯೆಲ್ಲೋ ಅಲರ್ಟ್ ಘೋಷಣೆ

By

Published : Nov 18, 2021, 10:52 AM IST

Updated : Nov 18, 2021, 12:15 PM IST

ಭಾರಿ ಮಳೆ (heavy rains) ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗೆ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ(Meteorology Department) ತಿಳಿಸಿದೆ.

Bangalore
ಬೆಂಗಳೂರು

ಬೆಂಗಳೂರು:ರಾಜಧಾನಿಯಲ್ಲಿ ಇನ್ನೂ 2 ದಿನಗಳ ಕಾಲ ಗುಡುಗು ಸಹಿತ ಭಾರಿ (heavy rains) ಮಳೆಯಾಗಲಿದೆ. ಈ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗೆ 2 ದಿನ ಯೆಲ್ಲೋ ಅಲರ್ಟ್( Yellow Alert) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ(Meteorology Department) ತಿಳಿಸಿದೆ.

ಕರ್ನಾಟಕದಾದ್ಯಂತ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಒಳನಾಡಿನ ಜಿಲ್ಲೆಗಳು ಸೇರಿ ಪಶ್ಚಿಮ ಘಟ್ಟದ ಎಲ್ಲ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಎಡೆ ಬಿಡದೇ ಸುರಿಯುತ್ತಿರುವ ಮಳೆ:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ(Low-pressure area) ಮತ್ತು ಮೇಲ್ಮೈ ಸುಳಿಗಾಳಿಯಿಂದಾಗಿ ನಗರದೆಲ್ಲೆಡೆ ಮುಂಜಾನೆಯಿಂದ ಎಡೆ ಬಿಡದೇ ಭಾರಿ ಮಳೆ ಸುರಿಯುತ್ತಿದೆ. ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರರಿಗೆ ಗುಂಡಿ ಗೋಚರಿಸದೇ ಬಿದ್ದು ಕೈಕಾಲು ಮುರಿದುಕೊಂಡ ಪ್ರಸಂಗಗಳು ಬೆಳಕಿಗೆ ಬರುತ್ತಿವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಹಲವೆಡೆ ಮರ ಬಿದ್ದ ದೂರುಗಳು ಪಾಲಿಕೆ ಹೆಲ್ಪ್ ಲೈನ್​​ನಲ್ಲಿ ದಾಖಲಾಗಿವೆ.

ಇದನ್ನೂ ಓದಿ:ಚಾಮರಾಜನಗರದಲ್ಲಿ ಮಳೆ ತಂದ ಫಜೀತಿ: ಶಾಲೆಗೆ ಹೋಗಲು ಮಕ್ಕಳಿಗೆ ಪಾಲಕರ ಹೆಗಲೇ ಸೇತುವೆ

ಚೆನ್ನೈನಲ್ಲೂ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Last Updated : Nov 18, 2021, 12:15 PM IST

ABOUT THE AUTHOR

...view details