ಕರ್ನಾಟಕ

karnataka

ರಾಜ್ಯದಲ್ಲಿ ಸಾಧಾರಣ ಮಳೆ ಮುನ್ಸೂಚನೆ.. ಮುಂದುವರಿಯಲಿದೆ ಮೋಡ ಕವಿದ ವಾತಾವರಣ..

By

Published : Dec 7, 2021, 12:34 PM IST

ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಎಂದಿನಂತೆ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ..

karnataka weather report
ಕರ್ನಾಟಕ ಹವಾಮಾನ ವರದಿ

ಬೆಂಗಳೂರು: ರಾಜ್ಯದ ಹಲವೆಡೆ ಮೋಡ ಕವಿದ ವಾರತವಾರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ. ಕರ್ನಾಟದ ದಕ್ಷಿಣ ಒಳನಾಡಿನಲ್ಲಿ ಮಳೆ ಇರಲಿದ್ದು, ಚಳಿ ಸಹ ಹೆಚ್ಚಾಗಲಿದೆ.

ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ.

ಇದನ್ನೂ ಓದಿ:ರಾಜ್ಯದ ಕೆಲವೆಡೆ ಇಂದು, ನಾಳೆ ಸಾಧಾರಣ ಮಳೆ ಮುನ್ಸೂಚನೆ

ಉಳಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಎಂದಿನಂತೆ ಮಲೆನಾಡು ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ತುಂತುರು ಮಳೆ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

...view details