ಕರ್ನಾಟಕ

karnataka

ವಿಷಾಹಾರ ಸೇವಿಸಿ ಇಂದಿರಾಗಾಂಧಿ ವಸತಿ ಶಾಲೆಯ 50 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

By

Published : Jan 15, 2022, 6:33 AM IST

ಎಂ.ಪಿ ರೇಣುಕಾಚಾರ್ಯ

ವಿಷ ಆಹಾರ ಸೇವಿಸಿ ಇಂದಿರಾಗಾಂಧಿ ಪರಿಶಿಷ್ಟ ಜಾತಿ ವಸತಿ ಶಾಲೆಯ 50 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ನಡೆದಿದೆ. ಅಸ್ವಸ್ಥ ಮಕ್ಕಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆ: ವಿಷ ಆಹಾರ ಸೇವಿಸಿ ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾಗಾಂಧಿ ಪರಿಶಿಷ್ಟ ಜಾತಿಯ ವಸತಿ ಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ರಾತ್ರಿ ವೇಳೆ ಊಟ ಮಾಡಿದ ಮಕ್ಕಳಿಗೆ ಫುಡ್ ಪಾಯಿಜನ್ ಆಗಿದ್ದು, ಐವತ್ತಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ವೈದ್ಯರು ಮಾಹಿತಿ‌ ನೀಡಿದ್ದಾರೆ. ಅಸ್ವಸ್ಥರಾದ ಮಕ್ಕಳನ್ನು ತಕ್ಷಣ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿದ ಎಂ.ಪಿ ರೇಣುಕಾಚಾರ್ಯ

ವಿಚಾರ ತಿಳಿಯುತ್ತಿದ್ದಂತೆ ಬೆಂಗಳೂರಿನಿಂದ ನೇರವಾಗಿ ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ‌ ನೀಡಿದ ಶಾಸಕ ಎಂ.ಪಿ ರೇಣುಕಾಚಾರ್ಯರವರು ಮಕ್ಕಳ ಆರೋಗ್ಯ ವಿಚಾರಿಸಿ ಮಕ್ಕಳಿಗೆ ಹಾಗೂ ಪೋಷಕರಿಗೆ ಧೈರ್ಯ ಹೇಳಿದರು.

ಓದಿ:ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಕ್ಕೆ ಸಿಕ್ತು ಕಾರಣ!: ತನಿಖಾ ವರದಿಯಿಂದ ಬಹಿರಂಗ

ABOUT THE AUTHOR

...view details