ಕರ್ನಾಟಕ

karnataka

ಯುವತಿಯರಿಗೆ ಚುಡಾಯಿಸಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ: ಇಬ್ಬರಿಗೆ ಚಾಕು ಇರಿತ

By

Published : Jul 31, 2022, 10:24 AM IST

2 ಗುಂಪುಗಳ ನಡುವಿನ ಗಲಾಟೆ ವಿಕೋಪಕ್ಕೆ‌ ತಿರುಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

davangere
ಸಂತೆಬೆನ್ನೂರು ಪೊಲೀಸ್ ಠಾಣೆ

ದಾವಣಗೆರೆ: ಯುವತಿಯರಿಗೆ ಚುಡಾಯಿಸುತ್ತಿದ್ದರು ಎಂದು ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ‌ ತಿರುಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕರೆಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದಿದೆ. ಚಿರಡೋಣಿ ಗ್ರಾಮದ ದೇವೇಂದ್ರ ಹಾಗೂ ಸುನೀಲ್ ಚಾಕು ಇರಿತಕ್ಕೊಳಗಾದವರು.

ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಕೆಲ ಯುವಕರು ಹಾಗೂ ಕರೆಕಟ್ಟೆ ಗ್ರಾಮದ ಯುವಕರ ನಡುವೆ ಗಲಾಟೆ‌ಯಾಗಿದೆ. ರಾಘವೇಂದ್ರ ಎಂಬಾತ ಯುವಕರಿಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗ್ತಿದೆ. ಕೆರೆಕಟ್ಟೆಯಲ್ಲಿ ಶಾಲಾ ಮಟ್ಟದ ಸ್ಪೋರ್ಟ್ಸ್ ನಡೆಯುವಾಗ ಘಟನೆ ನಡೆದಿದೆ.

ಆರೋಪಿ ರಾಘವೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಕು ಇರಿತಕ್ಕೆ ಒಳಗಾದ ಇಬ್ಬರು ಯುವಕರಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:'ಕಳ್ಳ ಪೊಲೀಸ್​ ಆಟ'ದಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಬಾಲಕನ ಹತ್ಯೆ

ABOUT THE AUTHOR

...view details