ಕರ್ನಾಟಕ

karnataka

2 ದಿನದಲ್ಲಿ ಕೇಂದ್ರ ನಾಯಕರನ್ನ ಸಂಪರ್ಕಿಸಿ ಸಂಪುಟ ವಿಸ್ತರಣೆ ಅಂತಿಮಗೊಳಿಸುವೆ : ಬೊಮ್ಮಾಯಿ

By

Published : May 15, 2022, 12:58 PM IST

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ನಿನ್ನೆ ನಡೆದ ಕೋರ್ ಕಮಿಟಿ ಸಭೆಯ ನಿರ್ಧಾರದ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದು ಮುಂದಿನ ಎರಡು ದಿನದಲ್ಲಿ ಸಂಪುಟ ವಿಸ್ತರಣೆ ಅಂತಿಮಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹೇಳಿದರು..

ಹುಬ್ಬಳ್ಳಿ: ವಿಧಾನ ಪರಿಷತ್ ಹಾಗೂ ರಾಜ್ಯ ಸಭೆ ಚುನಾವಣೆಯಲ್ಲಿ ಬ್ಯುಸಿ ಇದ್ದೇವೆ‌. ನಿನ್ನೆಯಷ್ಟೇ ಕೋರ್ ಕಮಿಟಿ ಸಭೆ ಆಗಿದೆ‌. ಸಭೆಯ ನಿರ್ಧಾರದ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದು ಎರಡು ದಿನದಲ್ಲಿ ಸಂಪುಟ ವಿಸ್ತರಣೆ ಅಂತಿಮಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ವಿಜಯೇಂದ್ರಗೆ ಪರಿಷತ್ ಚುನಾವಣೆಯಲ್ಲಿ ಸ್ಥಾನ‌ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹಿಜಾಬ್, ಹಲಾಲ್, ಆಜಾನ್ ವಿವಾದಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದೇವೆ. ನಾವು ದಕ್ಷ, ಜನಪರ ಆಡಳಿತ ನೀಡುತ್ತಿದ್ದೇವೆ. ವಿರೋಧಿಗಳಿಗೆ ಅದೇ ನಮ್ಮ ಉತ್ತರ ಎನ್ನುವ ಮೂಲಕ ತಿರುಗೇಟು ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿರುವುದು..

ವಿಮಾನದಲ್ಲೇ ಸಂಪುಟ ವಿಸ್ತರಣೆ ಚರ್ಚೆ :ಬೆಂಗಳೂರಿನಿಂದ ಹುಬ್ಬಳ್ಳಿಗೆ ಒಂದೇ ವಿಮಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಹಾಗೂ‌ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗಮಿಸಿದರು. ವಿಮಾನದಲ್ಲಿಯೇ ಸಚಿವ ಸಂಪುಟದ ಬಗ್ಗೆ ಚರ್ಚಿಸಿದ ಅವರು, ಯಾರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು, ಯಾರಿಗೆ ಪಟ್ಟ ಕಟ್ಟಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.‌

ಇದನ್ನೂ ಓದಿ:ಟಿಸಿಎಸ್ 10ಕೆ ರನ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ

ABOUT THE AUTHOR

...view details