ಕರ್ನಾಟಕ

karnataka

ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ : ನಳಿನ್​ ಕುಮಾರ್​ ಕಟೀಲ್​​

By

Published : Jun 6, 2022, 1:06 PM IST

ಆರ್‌ಎಸ್‌ಎಸ್​​ಗೆ ಕೈ ಹಾಕಿದ ನೆಹರು ಮತ್ತು ಇಂದಿರಾ ಗಾಂಧಿ ಸುಟ್ಟು ಹೋಗಿದ್ದಾರೆ. ಹಾಗೆ ಚಡ್ಡಿಗೆ ಬೆಂಕಿ ಹಚ್ಚಲು ಹೇಳಿದ ಸಿದ್ದರಾಮಯ್ಯ ಸುಟ್ಟು ಹೋಗ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ಕಿಡಿಕಾರಿದರು..

BJP President Nalin Kumar Kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್

ಹುಬ್ಬಳ್ಳಿ :ರಾಜ್ಯದಲ್ಲಿ ನಡೆದ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ಆರೋಪಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಹುಬ್ಬಳ್ಳಿಯ ಗಲಭೆ ಹಿಂದೆ ಕಾಂಗ್ರೆಸ್ ಇದೆ. ಆರ್‌ಎಸ್‌ಎಸ್ ಒಂದು ಸೇವಾ ಸಂಸ್ಥೆ. ದೇಶ ಭಕ್ತರನ್ನ ನಿರ್ಮಾಣ ಮಾಡುವ ಸಂಸ್ಥೆ.

ಇದಕ್ಕೆ ಕೈ ಹಾಕಿದ ನೆಹರು ಮತ್ತು ಇಂದಿರಾ ಗಾಂಧಿ ಸುಟ್ಟು ಹೋಗಿದ್ದಾರೆ. ಕಾಂಗ್ರೆಸ್ ಬೆಂಕಿಗೆ ಕೈ ಹಾಕಿ ಸುಟ್ಟು ಹೋಗುತ್ತದೆ. ಸಿದ್ದರಾಮಯ್ಯ ಆರ್​​ಎಸ್​ಎಸ್ ಚಡ್ಡಿಗೆ ಬೆಂಕಿ ಹಾಕಲು ಹೇಳಿದ್ದಾರೆ, ಅವರೇ ಸುಟ್ಟು ಹೋಗುತ್ತಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​​ ಕುಮಾರ್​​ ಕಟೀಲ್ ವಾಗ್ದಾಳಿ ನಡೆಸಿರುವುದು..

ರಾಜ್ಯದಲ್ಲಿ ಅತಂತ್ರ ಸ್ಥಿತಿಯನ್ನು ಉಂಟು ಮಾಡಲು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸಕ್ಕೆ ಮುಂದಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಆದ ಗಲಾಟೆಗಳಿಗೆ ಅವರ ವೈಫಲ್ಯವೇ ಕಾರಣ. ರಾಜ್ಯದಲ್ಲಿ ನಡೆಯುವ ಒಳ್ಳೆಯ ಕಾರ್ಯಗಳಿಗೆ ಸಿದ್ಧರಾಮಯ್ಯ ಬೆಂಬಲ ನೀಡಲ್ಲ. ಅವರು ಎಲ್ಲಾ ವಿಚಾರದಲ್ಲಿ ಮಾತನಾಡಬೇಕು ಎಂದು ಮಾತನಾಡುತ್ತಾರೆ ಎಂದರು.

ಕಾಂಗ್ರೆಸ್‌ಗೆ ಹಿಂದೂಗಳ ಮತ ಬೇಡ ‌ಎನ್ನುವ ಹಂತಕ್ಕೆ ಬಂದು ನಿಂತಿದ್ದಾರೆ. ಜೆಡಿಎಸ್ ಮುಸ್ಲಿಂ ಮತಗಳನ್ನ ಓಲೈಕೆ ಮಾಡಲಿಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಪಠ್ಯ ಪುಸ್ತಕದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಆದರೆ, ತಪ್ಪುಗಳಿದ್ದರೆ ತಿದ್ದುವುದಾಗಿ ಸರ್ಕಾರ ಹೇಳಿದೆ ಎಂದರು. ಶ್ರೀರಾಮಸೇನೆಯಿಂದ ಮೈಕ್ ವಿಚಾರವಾಗಿ‌ 2ನೇ ಹಂತದ ಹೋರಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನದಲ್ಲಿ ಎಲ್ಲಾ ಸಂಘಟನೆಗಳಿಗೆ ಪ್ರತಿಭಟನೆ ಮಾಡುವ ಅಧಿಕಾರವಿದೆ. ಅವರು ಮಾಡಲಿ. ಆದರೆ, ಅವರ ಅಜೆಂಡಾಗಳಿಗೆ ನಾವು ಮನ್ನಣೆ ನೀಡಲು ಆಗಲ್ಲ ಎಂದರು.

ಹಿಂದೂಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ಅದಕ್ಕೆ ಬದ್ಧವಾಗಿ ದೇಶದಲ್ಲಿ ಹಲವಾರು ಕಾಯ್ದೆ ತಂದಿದ್ದೇವೆ. ಆದರೆ, 'ಸರ್ವೇ ಜನಾಃ ಸುಖಿನೋ ಭವಂತು' ಎನ್ನುವ ತತ್ವ ನಮ್ಮದು. ಒಂದು ಸರ್ಕಾರದಲ್ಲಿದ್ದಾಗ ಸಂವಿಧಾನದ ಆಧಾರದ ಮೇಲೆ ಕೆಲಸ ಮಾಡಬೇಕು. ಆ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಇದನ್ಣೂ ಓದಿ:ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ : ಸಿಎಂ ಬೊಮ್ಮಾಯಿ ವಿಶ್ವಾಸ

ABOUT THE AUTHOR

...view details