ಕರ್ನಾಟಕ

karnataka

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡನೆ: ಕಾಂಗ್ರೆಸ್​ ವಿನೂತನ ಪ್ರತಿಭಟನೆ

By

Published : Mar 31, 2022, 2:23 PM IST

ಹುಬ್ಬಳ್ಳಿ ನಗರದ ಗೋಪನಕೊಪ್ಪ ವೃತ್ತದಲ್ಲಿಂದು ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

protest
ಕೇಂದ್ರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ವಿನೂತನ ಪ್ರತಿಭಟನೆ

ಹುಬ್ಬಳ್ಳಿ: ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್, ಸ್ಕೂಟರ್, ಬೈಕ್​ಗಳಿಗೆ ಹೂವಿನ ಹಾರ ಹಾಕಿ, ಹಲಗಿ ಬಾರಿಸುವ ಮೂಲಕ ಕಾಂಗ್ರೆಸ್​​​​ನಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಗೋಪನಕೊಪ್ಪ ವೃತ್ತದಲ್ಲಿ ಇಂದು ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ನಿಂದ ವಿನೂತನ ಪ್ರತಿಭಟನೆ

ಬಿಜೆಪಿ ಸರ್ಕಾರದ ದುಬಾರಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ‌. ನಿತ್ಯ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಸಿಲಿಂಡರ್ ಬೆಲೆ ಗಗನಕ್ಕೆ ಏರುತ್ತಿದ್ದು, ಜನಸಾಮಾನ್ಯರು ನಲಗುವಂತಾಗಿದೆ. ಬಿಜೆಪಿ ಸರ್ಕಾರ ತೆರಿಗೆ ವಸೂಲಿ ಮಾಡುತ್ತಿದ್ದಾರೆಯೇ ಹೊರತು ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಈ ಸಂದರ್ಭದಲ್ಲಿ ರಜತ್ ಉಳ್ಳಾಗಟ್ಟಿಮಠ, ಸುವರ್ಣ ಕಲಕುಂಟ್ಲಾ, ಪ್ರಕಾಶ ಕುರಹಟ್ಟಿ, ಸಂದೀಲ್ ಕುಮಾರ್, ಮಹಮ್ಮದ್ ಶರೀಫ ಗರಗದ, ದೀಪಾ ಗೌರಿ, ಬಂಗಾರೇಶ ಹಿರೇಮಠ, ಶಾಕೀರ್ ಸನದಿ, ಅಶೋಕ ಕಲಾದಗಿ, ಬಸವರಾಜ ತಮ್ಮಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ:'ಬೆಲೆಯೇರಿಕೆ ಮುಕ್ತ ಭಾರತ'ಕ್ಕೆ ಕಾಂಗ್ರೆಸ್ ಆಗ್ರಹ: ಸಿಲಿಂಡರ್​ಗೆ ಹಾರ ಹಾಕಿ ಪ್ರತಿಭಟನೆ

ABOUT THE AUTHOR

...view details