ಕರ್ನಾಟಕ

karnataka

ಬಿಡದ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ, ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

By

Published : Jul 7, 2022, 9:35 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಬಂಟ್ವಾಳ ಬಳಿ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಮಳೆ
ದಕ್ಷಿಣ ಕನ್ನಡ ಮಳೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8 ಮತ್ತು 9 ರಂದು ಎರಡು ದಿನಗಳ ಕಾಲ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ ವಿ ಆದೇಶಿಸಿದ್ದಾರೆ.

ಮಂಗಳವಾರದಿಂದ ಶಾಲಾ ಕಾಲೇಜಿಗೆ ನೀಡಿದ್ದ ರಜೆಯನ್ನು ಶುಕ್ರವಾರ, ಶನಿವಾರಕ್ಕೂ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು, ಪದವಿ, ಸ್ನಾತಕೋತ್ತರ, ಡಿಪ್ಲೋಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಇನ್ನೂ ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜಿಲ್ಲಾ‌ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ವಿಪತ್ತು‌ ನಿರ್ವಹಣೆಯನ್ನು ಚಾಚು ತಪ್ಪದೆ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಡಿಸಿ ಆದೇಶಿಸಿದ್ದಾರೆ.

(ಇದನ್ನೂ ಓದಿ: ಬಂಟ್ವಾಳ: ಮನೆ ಮೇಲೆ ಕುಸಿದ ಗುಡ್ಡದ ಮಣ್ಣು, ಕೇರಳದ ಮೂವರು ಕಾರ್ಮಿಕರು ಸಾವು)

ABOUT THE AUTHOR

...view details