ಕರ್ನಾಟಕ

karnataka

ಸಿಎಂಗೆ ಬೆದರಿಕೆ ಪ್ರಕರಣ: ಹಿಂದೂ ಮಹಾಸಭಾ ಮುಖಂಡರಿಗೆ ಜಾಮೀನು

By

Published : Sep 23, 2021, 12:51 AM IST

ಸಿಎಂಗೆ ಬೆದರಿಕೆ ಹಾಕಿದ ಆರೋಪದಲ್ಲಿ ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಜೆಎಂಎಫ್​​ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

threatening to cm: bails granted to accused
ಸಿಎಂಗೆ ಬೆದರಿಕೆ ಪ್ರಕರಣ: ಹಿಂದೂ ಮಹಾಸಭಾ ಮುಖಂಡರಿಗೆ ಜಾಮೀನು

ಮಂಗಳೂರು: ಮೈಸೂರು ದೇವಸ್ಥಾನದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿರುವ ಹಿಂದೂ ಮಹಾಸಭಾದ ನಾಲ್ವರು ಮುಖಂಡರಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಶನಿವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ಮುಖಂಡ ಧರ್ಮೇಂದ್ರ‌ ಅವರು ಗಾಂಧೀಜಿಯನ್ನು ಬಿಡಲಿಲ್ಲ, ಹಿಂದೂ ವಿರೋಧಿ ಯಾಗಿದ್ದಕ್ಕೆ ಅವರನ್ನು ಹತ್ಯೆ ಮಾಡಲಾಯಿತು. ಇನ್ನು ನಿಮ್ಮನ್ನು ಬಿಡ್ತೇವಾ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಯ ಮೂಲಕ ಮುಖ್ಯಮಂತ್ರಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮತ್ತೊಂದು ಗುಂಪಿನ ರಾಜ್ಯಾಧ್ಯಕ್ಷ ಎಲ್.ಕೆ.ಸುವರ್ಣ ಎಂಬುವರು ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ‌ ದೂರು ನೀಡಿದ್ದರು.

ಈ ದೂರಿನ ಆಧಾರದಲ್ಲಿ‌ ಬರ್ಕೆ ಪೊಲೀಸರು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ರಾಜೇಶ್ ಪವಿತ್ರನ್, ಪ್ರೇಮ್ ಪೊಳಲಿ ಮತ್ತು ಸಂದೀಪ್ ಶೆಟ್ಟಿ ಎಂಬುವರನ್ನು ಬಂಧಿಸಿದ್ದರು.

ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಧರ್ಮೇಂದ್ರಗೆ ಪೊಲೀಸ್ ಕಸ್ಟಡಿ ಮತ್ತು ಇತರರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬುಧವಾರ ನಾಲ್ವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಜೆಎಂಎಫ್​​ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ:ಸಿಎಂಗೆ ಬೆದರಿಕೆ ಪ್ರಕರಣ: ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಪೊಲೀಸ್ ಕಸ್ಟಡಿಗೆ

ABOUT THE AUTHOR

...view details