ಕರ್ನಾಟಕ

karnataka

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೆಡ್ ಅಲರ್ಟ್ ಘೋಷಣೆ

By

Published : Aug 3, 2022, 10:19 AM IST

ದಕ್ಷಿಣಕನ್ನಡ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ.

red alert announced in Dakshina Kannada district, Heavy rain in Dakshina Kannada district, Mangalore rain news, ದಕ್ಷಿಣ ಕನ್ನಡ ಜಿಲ್ಲೆಗೆ ಮೂರು ದಿನ ರೆಡ್ ಅಲರ್ಟ್ ಘೋಷಣೆ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ, ಮಂಗಳೂರು ಮಳೆ ಸುದ್ದಿ,
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೆಡ್ ಅಲರ್ಟ್ ಘೋಷಣೆ

ಮಂಗಳೂರು:ದ‌ಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಸೋಮವಾರ ರಾತ್ರಿಯಿಂದ ಬಿರುಸಿನ ಮಳೆಯಾಗುತ್ತಿದೆ. ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ಭಾರಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕು ಹೊರತುಪಡಿಸಿ ಉಳಿದಡೆ ಸಾಧಾರಣ ಮಳೆಯಾಗುತ್ತಿದೆ. ಇದೀಗ ಹವಾಮಾನ ಇಲಾಖೆ ಇಂದಿನಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯಿಂದ ಈಗಾಗಲೇ ಸಾಕಷ್ಟು ಹಾನಿಯುಂಟಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೂರು ದಿನಗಳ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿರುವುದು ಆತಂಕ ಸೃಷ್ಟಿಸಿದೆ.

ಓದಿ:ಸುಳ್ಯ: ಮುಸ್ಲಿಂ ಯುವಕನನ್ನು ನದಿಗೆ ಹಾರಿ ರಕ್ಷಿಸಿದ ಹಿಂದೂ ಯುವಕ

ABOUT THE AUTHOR

...view details