ಕರ್ನಾಟಕ

karnataka

ಐಟಿ ದಾಳಿ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ: ಸಿಎಂ ಬೊಮ್ಮಾಯಿ

By

Published : Oct 7, 2021, 1:21 PM IST

ಆದಾಯ ತೆರಿಗೆ (ಐಟಿ) ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ- ಸಿಎಂ

CM Basavaraj Bommai
ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು:ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳು ದಾಳಿ ಮಾಡಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಮೈಸೂರಿನ ನಾರಾಯಣ ಶಾಸ್ತ್ರಿಯಲ್ಲಿರುವ ಶ್ರೀ ರಾಘವೇಂದ್ರ ಮಠಕ್ಕೆ ಭೇಟಿ ನೀಡಿದ ಸಿಎಂ, ದೇವರ ದರ್ಶನ ಪಡೆದರು. ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸಾಂವಿಧಾನಿಕ ಹುದ್ದೆಗೇರಿ 20 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಪೋಸ್ಟ್ ಕಾರ್ಡ್ ಮೂಲಕ ಶುಭ ಕೋರಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ, ನನಗೆ ಐಟಿ ದಾಳಿ ಬಗ್ಗೆ ಮಾಹಿತಿಯೇ ಇಲ್ಲ. ಈಗ ಮಾಹಿತಿ ಪಡೆಯಬೇಕು. ಮಾಹಿತಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಬಿಎಸ್​ವೈ ಆಪ್ತನ ಮನೆ ಸೇರಿ ಬೆಂಗಳೂರಿನ ಹಲವೆಡೆ IT ದಾಳಿ: ಕಾಂಟ್ರಾಕ್ಟರ್ಸ್​, ಉದ್ಯಮಿಗಳಿಗೆ ಆಘಾತ

ABOUT THE AUTHOR

...view details