ಶಿವಮೊಗ್ಗ: ಅಂದು ಗೋಕಾಕ್ ಚಳವಳಿ ನಡೆದಿತ್ತು, ಇಂದು ಕುಪ್ಪಳ್ಳಿಯಿಂದ ಕನ್ನಡದ ಕಹಳೆ ಮೊಳಗಿದೆ. ಕುವೆಂಪು ಅಂದ್ರೆ ಕನ್ನಡ, ಬಸವ ಅಂದ್ರೆ ಕರ್ನಾಟಕ. ಇವರಿಬ್ಬರಿಗೂ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು ಎಂದು ಸಂಗೀತ ನಿರ್ದೇಶಕ ಹಂಸಲೇಖ ಬೇಸರ ವ್ಯಕ್ತಪಡಿಸಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ಪಠ್ಯದಿಂದ ಕುವೆಂಪು ಕೃತಿ ಕೈ ಬಿಟ್ಟಿದ್ದನ್ನು ವಿರೋಧಿಸಿ ಕುಪ್ಪಳ್ಳಿಯಿಂದ ತೀರ್ಥಹಳ್ಳಿವರೆಗೂ ಪ್ರಾರಂಭವಾದ ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕನ್ನಡಕ್ಕೆ ಮಹಾಮನೆ ಕಲ್ಯಾಣ, ಕವಿಮನೆ ಕವಿಶೈಲವಾಗಿದೆ. ಕನ್ನಡಕ್ಕೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು ಎಂದು ಪ್ರಶ್ನಿಸಿದರು.