ಕರ್ನಾಟಕ

karnataka

ಶಿವಮೊಗ್ಗದಲ್ಲಿ ಆ.20 ರವರೆಗೆ ನಿಷೇಧಾಜ್ಞೆ: ಆರೋಪಿಗಳಿಗೆ ಮತ್ತೆರಡು ದಿನ ಪೊಲೀಸ್ ಕಸ್ಟಡಿ

By

Published : Aug 18, 2022, 8:24 PM IST

Updated : Aug 18, 2022, 10:01 PM IST

ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಇದೀಗ ಅದನ್ನು ಮತ್ತೆರಡು ದಿನಕ್ಕೆ ಮುಂದೂಡಿ ತಹಶೀಲ್ದಾರ್ ಎನ್.ಜೆ.ನಾಗರಾಜ್ ಇಂದು ಆದೇಶ ಹೊರಡಿಸಿದ್ದಾರೆ.

Section 144 extended for two more days in Shimoga
ಶಿವಮೊಗ್ಗದಲ್ಲಿ ಸೆಕ್ಷನ್ 144 ಮತ್ತೆರಡು ದಿನ ವಿಸ್ತರಣೆ

ಶಿವಮೊಗ್ಗ:ಸಾವರ್ಕರ್​​​ ಫ್ಲೆಕ್ಸ್ ತೆರವು ವಿಚಾರದಲ್ಲಿ ನಗರದಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಅ​ನ್ನು ಆಗಸ್ಟ್ 20 ರ ಬೆಳಗ್ಗೆ 6 ಗಂಟೆಯತನಕ ವಿಸ್ತರಿಸಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಸೋಮವಾರದಿಂದ ಮೂರು ದಿನಗಳ ಕಾಲ‌ ನಿಷೇಧಾಜ್ಞೆ ಹಾಕಲಾಗಿತ್ತು. ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬೂದಿ ಮುಚ್ಚಿದ ಕೆಂಡದಂತಿದೆ. ಹಾಗಾಗಿ, ಮತ್ತೆರಡು ದಿನ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.

ಚಾಕು ಇರಿದ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯನ್ನು ಮತ್ತೆರಡು ದಿನ ವಿಸ್ತರಿಸಿ 5ನೇ ಜೆಎಂಎಫ್​ಸಿ‌ ನ್ಯಾಯಾಲಯ ಆದೇಶಿಸಿದೆ. ಮಾಲ್​ನಲ್ಲಿ ಗಲಾಟೆ ಮಾಡಿದ ಶರೀಫ್ ಎಂಬಾತನ ಪೊಲೀಸ್ ಕಸ್ಟಡಿಯನ್ನು ಎರಡನೇ ಜೆಎಂಎಫ್​​ಸಿ ನ್ಯಾಯಾಲಯ ವಿಸ್ತರಿಸಿದೆ.

ಆದೇಶ ಪ್ರತಿ

ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಇರಿಸಲಾಗಿದ್ದ ವೀರ ಸಾವರ್ಕರ್ ಫ್ಲೆಕ್ಸ್ ತೆರವು ಮಾಡಿದ ಬೆನ್ನಲ್ಲೇ ಆ.15 ರಂದು ಗಲಾಟೆ ನಡೆದಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಹೀಗಿದ್ದರೂ ಕೆಲ ಗಂಟೆಗಳಲ್ಲಿ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದರು.

ಇದನ್ನೂ ಓದಿ: ಶಿವಮೊಗ್ಗ ಚಾಕು ಇರಿತ ಪ್ರಕರಣ: ಆರೋಪಿಗಳಿಗೆ ಎರಡು ದಿನ ಪೊಲೀಸ್ ಕಸ್ಟಡಿ

Last Updated : Aug 18, 2022, 10:01 PM IST

ABOUT THE AUTHOR

...view details