ಕರ್ನಾಟಕ

karnataka

ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಐಟಿ ರೈಡ್.. ತುಮಕೂರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

By

Published : Oct 11, 2019, 9:26 PM IST

ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್​ ಒಡೆತನದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಐಟಿ ದಾಳಿಯನ್ನು ಖಂಡಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ತುಮಕೂರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ತುಮಕೂರು:ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್​ಗೆ ಸೇರಿದ 'ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆ'ಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್​ಹಾಲ್ ವೃತ್ತದಲ್ಲಿ ಟೈರ್​ಗಳಿಗೆ ಬೆಂಕಿ ಹಚ್ಚಿ, ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ..

ಡಾ.ಜಿ ಪರಮೇಶ್ವರ್ ಒಡೆತನದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ಕೂಡ ತಪಾಸಣೆ ಮುಂದುವರೆಸಿದ್ದಾರೆ. ಐಟಿ ಅಧಿಕಾರಿಗಳ ದಾಳಿಯನ್ನು ಖಂಡಿಸಿ ನಿನ್ನೆಯಿಂದಲೂ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ಇಂದು ತುಮಕೂರಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್​.ರಾಮಕೃಷ್ಣ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಟೌನ್​ಹಾಲ್ ವೃತ್ತದವರೆಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಟೌನ್​ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕಾಂಗ್ರೆಸ್ ಪಕ್ಷದ ದಲಿತ ಮುಖಂಡರಾದ ವಾಲೆ ಚಂದ್ರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಇನ್ನೂರಕ್ಕೂ ಹೆಚ್ಚು ಕಾಂಗ್ರೆಸ್​ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ವೇಳೆ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ಇನ್ನು, ಐಟಿ ದಾಳಿ ಖಂಡಿಸಿ ದಲಿತ ಪರ ಸಂಘಟನೆಗಳು ಹಾಗೂ ಡಾ.ಜಿ ಪರಮೇಶ್ವರ್ ಅಭಿಮಾನಿ ಬಳಗದ ಸದಸ್ಯರು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದರು.

Intro:ತುಮಕೂರು: ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಟೌನ್ ಹಾಲ್ ವೃತ್ತದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.


Body:ನೆನ್ನೆಯಿಂದ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರಿಂದ ಬಿಂಬಿತರಾಗಿರುವ ಮಾಜಿ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರ ಒಡೆತನದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ರಾಮಕೃಷ್ಣ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಟೌನ್ ಹಾಲ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಂತರ ಟೌನ್ ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕಾಂಗ್ರೆಸ್ ಪಕ್ಷದ ದಲಿತ ಮುಖಂಡರಾದ ವಾಲೆ ಚಂದ್ರು ಅವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಇನ್ನೂರಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು, ಇದೇ ವೇಳೆ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.


Conclusion:ವರದಿ
ಸುಧಾಕರ

ABOUT THE AUTHOR

...view details