ಕರ್ನಾಟಕ

karnataka

ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗಾಗಿ ವಿಶೇಷ ತಂಡ ರಚನೆ

By

Published : Nov 30, 2019, 10:06 PM IST

ತುಮಕೂರು ಜಿಲ್ಲೆಯ ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗಾಗಿ 'ಅನುಷ್ಠಾನ ಮೌಲ್ಯಮಾಪನ ಮತ್ತು ಯೋಜನೆ' ಎಂಬ ಹೊಸ ತಂಡವನ್ನು ರಚನೆ ಮಾಡಲಾಗಿದೆ ಎಂದು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿ
ಸ್ಮಾರ್ಟ್ ಸಿಟಿ ಕಾಮಗಾರಿ

ತುಮಕೂರು: ಜಿಲ್ಲೆಯ ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗಾಗಿ 'ಅನುಷ್ಠಾನ ಮೌಲ್ಯಮಾಪನ ಮತ್ತು ಯೋಜನೆ' ಎಂಬ ಹೊಸ ತಂಡವನ್ನು ರಚನೆ ಮಾಡಲಾಗಿದೆ ಎಂದು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ತುಮಕೂರು ಸ್ಮಾರ್ಟ್ ಸಿಟಿ ಕಾಮಗಾರಿ

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪಿಎಂಸಿ ಸಂಸ್ಥೆ ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಎಂಜಿನಿಯರ್​ಗಳ ತಂಡ ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ ಎಂದು ಸಾರ್ವಜನಿಕರಿಂದ ಮತ್ತು ಜನಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಹಾಗೂ ಸಂಸದರೊಂದಿಗೆ ಚರ್ಚಿಸಿ ಈ ತಂಡವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ತಂಡದ ಅಧ್ಯಕ್ಷರನ್ನಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕರಾದ ಕೆ.ಜೈ ಪ್ರಕಾಶ್, ಮೂವರು ಸದಸ್ಯರನ್ನಾಗಿ ಕಾವೇರಿ ನೀರಾವರಿ ನಿಗಮದ ತಾಂತ್ರಿಕ ನಿರ್ದೇಶಕರಾದ ಎಂ.ರವೀಂದ್ರ, ನಿವೃತ್ತ ಅಧೀಕ್ಷಕ ಅಭಿಯಂತರ ಡಿ.ಎಸ್.ಹರೀಶ್, ಭದ್ರಾ ಮೇಲ್ದಂಡೆ ಯೋಜನೆಯ ಉಪ ಮುಖ್ಯ ಅಭಿಯಂತರ ಹೆಚ್.ಬಿ.ಮಲ್ಲೇಶ್ ಅವರನ್ನು ನೇಮಿಸಲಾಗಿದೆ.

ತುಮಕೂರು ಸ್ಮಾರ್ಟ್ ಸಿಟಿ ಕಾಮಗಾರಿ

ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ತಾಂತ್ರಿಕ ವರದಿಗಳನ್ನು ಪಡೆದು ಅದರ ಅಗತ್ಯತೆ ಹಾಗೂ ಗುಣಮಟ್ಟದ ವರದಿ ನೀಡುವಂತೆ ತಂಡಕ್ಕೆ ಸೂಚಿಸಲಾಗಿದೆ. ಅದೇ ರೀತಿ ತಪ್ಪಿತಸ್ಥ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್​​ಗೆ ಸೇರಿಸಲು ಸಹ ತಿಳಿಸಿದ್ದಾರೆ. ಮುಖ್ಯವಾಗಿ ಅಮಾನಿಕೆರೆ ಅಭಿವೃದ್ಧಿ ಕಾಮಗಾರಿ ಮತ್ತು ಸ್ಮಾರ್ಟ್ ರಸ್ತೆಗಳ ಕಾಮಗಾರಿ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

Intro:Body:ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟ ವರದಿ ನೀಡಲು ವಿಶೇಷ ತಂಡ ರಚಿಸಿದ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್....

ತುಮಕೂರು
ತುಮಕೂರು ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗಾಗಿ 'ಅನುಷ್ಠಾನ ಮೌಲ್ಯಮಾಪನ ಮತ್ತು ಯೋಜನೆ' ತಂಡವನ್ನು ರಚನೆ ಮಾಡಲಾಗಿದೆ ಎಂದು ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯ ಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಪಿಎಂಸಿ ಸಂಸ್ಥೆ ಮತ್ತು ಸ್ಮಾರ್ಟ್ ಸಿಟಿ ಯೋಜನೆಯ ಇಂಜಿನಿಯರ್ ಗಳ ತಂಡ ಸಮರ್ಪಕವಾಗಿ ಅನುಷ್ಠಾನಗೊಳಿಸಿಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ಮತ್ತು ಜನಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಹಾಗೂ ಸಂಸದರೊಂದಿಗೆ ಚರ್ಚಿಸಿ ತಂಡವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.
ತಂಡದ ಅಧ್ಯಕ್ಷರನ್ನಾಗಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕರಾದ ಕೆ ಜೈ ಪ್ರಕಾಶ್, ಮೂವರು ಸದಸ್ಯರನ್ನಾಗಿ ಕಾವೇರಿ ನೀರಾವರಿ ನಿಗಮದ ತಾಂತ್ರಿಕ ನಿರ್ದೇಶಕರಾದ ಎಂ ರವೀಂದ್ರ, ನಿವೃತ್ತ ಅಧೀಕ್ಷಕ ಅಭಿಯಂತರ ಡಿಎಸ್ ಹರೀಶ್, ಭದ್ರಾ ಮೇಲ್ದಂಡೆ ಯೋಜನೆಯ ಉಪ ಮುಖ್ಯ ಅಭಿಯಂತರ ಎಚ್ ಬಿ ಮಲ್ಲೇಶ್ ಅವರನ್ನು ನೇಮಿಸಲಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ತಾಂತ್ರಿಕ ವರದಿಗಳನ್ನು ಪಡೆದು ಅದರ ಅಗತ್ಯತೆ ಹಾಗೂ ಗುಣಮಟ್ಟದ ವರದಿಯನ್ನು ನೀಡುವಂತೆ ತಂಡಕ್ಕೆ ಸೂಚಿಸಿದ್ದಾರೆ. ಅದೇ ರೀತಿ ತಪ್ಪಿತಸ್ಥ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲು ಸಹ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದಾರೆ.
ಮುಖ್ಯವಾಗಿ ಅಮಾನಿಕೆರೆ ಅಭಿವೃದ್ಧಿ ಕಾಮಗಾರಿ ಮತ್ತು ಸ್ಮಾರ್ಟ್ ರಸ್ತೆಗಳ ಕಾಮಗಾರಿ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.Conclusion:

ABOUT THE AUTHOR

...view details