ಕರ್ನಾಟಕ

karnataka

ತುಮಕೂರು: ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

By

Published : Sep 29, 2021, 9:48 PM IST

ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ವೇಳೆ ಗ್ರಾಮಸ್ಥರು ಏಕಾಏಕಿ ಬೆಸ್ಕಾಂ ಸಿಬ್ಬಂದಿ ಮೇಲೆ ಕಲ್ಲು, ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ.

villagers assault on bescom Staff
ಬೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ

ತುಮಕೂರು:ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿ ಮೇಲೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

ಘಟನೆಯಲ್ಲಿ ಬೆಸ್ಕಾಂ ಶಾಖಾಧಿಕಾರಿ ರಾಜಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಲೈನ್ ಮ್ಯಾನ್‌ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆದಿದೆ. ತೆಂಗಿನ ಎಡೆಮಟ್ಟೆ ಹಾಗು ಕಲ್ಲಿನಿಂದ ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್​​​ನಲ್ಲಿ ಸೆರೆಯಾಗಿದೆ. ಅಲ್ಲದೇ ಮಹಿಳೆಯೊಬ್ಬಳು ಕಲ್ಲು ಹಿಡಿದು ಅಟ್ಟಾಡಿಸಿ ಹೊಡೆಯುವ ದೃಶ್ಯ ಕೂಡ ಕಂಡು ಬಂದಿದೆ.

ಬೆಸ್ಕಾಂ ಶಾಖಾಧಿಕಾರಿ ರಾಜಣ್ಣ

ಸದ್ಯ ಗಾಯಾಳುಗಳೆಲ್ಲಾ ಶಿರಾ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೊಲೆಯಾದ ವ್ಯಕ್ತಿಯ ಶವ ಅರೆಬೆಂದ ಸ್ಥಿತಿಯಲ್ಲಿ ಶಿರಾಡಿ ಘಾಟ್‌ನಲ್ಲಿ ಪತ್ತೆ

ABOUT THE AUTHOR

...view details