ಕರ್ನಾಟಕ

karnataka

ಆಂಧ್ರದಿಂದ ಗಾಂಜಾ ತಂದು ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

By

Published : Apr 16, 2021, 5:45 PM IST

Updated : Apr 16, 2021, 6:42 PM IST

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯ ಬ್ಯಾಂಕ್ ಸರ್ಕಲ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ  ವ್ಯಕ್ತಿಗಳನ್ನು ಬಂಧಿಸುವಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

Arrested
Arrested

ದೊಡ್ಡಬಳ್ಳಾಪುರ: ಆಂಧ್ರದಿಂದ ಗಾಂಜಾ ತಂದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾರಲು ಯತ್ನಿಸಿದ ಇಬ್ಬರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಪಠಾಣ್ (23), ಹನೀಪ್ (21) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ 2 ಲಕ್ಷ ಮೌಲ್ಯದ 7 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಆಂಧ್ರಪ್ರದೇಶದ ನಿವಾಸಿಗಳಾದ ಆರೋಪಿಗಳು ಬಸ್​​​​ನ ಮೂಲಕ ಗಾಂಜಾ ತಂದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶವಾದ ಬ್ಯಾಂಕ್ ಸರ್ಕಲ್ ಬಳಿ ಎರಡು ಬ್ಯಾಗಿನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದರು.

ಖಚಿತ ಮಾಹಿತಿ ಮರೆಗೆ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಸತೀಶ್ ಕುಮಾರ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿಯನ್ನು ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Last Updated : Apr 16, 2021, 6:42 PM IST

ABOUT THE AUTHOR

...view details