ಕರ್ನಾಟಕ

karnataka

ಲಖೀಂಪುರ ಖೇರಿ ಹಿಂಸಾಚಾರದ ಚಾರ್ಜ್‌ಶೀಟ್‌ ಸಲ್ಲಿಕೆ: ಕೇಂದ್ರ ಸಚಿವರ ಪುತ್ರ ಪ್ರಮುಖ ಆರೋಪಿ

By

Published : Jan 3, 2022, 3:38 PM IST

2021ರ ಅಕ್ಟೋಬರ್‌ 3 ರಂದು ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಲಖೀಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಅಶಿಶ್‌ ಅವರಿದ್ದರು ಎನ್ನಲಾದ ಕಾರು ರೈತರ ಹರಿದು ವ್ಯಾಪಕ ಹಿಂಸಾಚಾರ ನಡೆದಿತ್ತು.

Lakhimpur violence: SIT files 5,000 page chargesheet; Ashish Mishra prime accused
ಲಖೀಂಪುರ ಖೇರಿ ಹಿಂಸಾಚಾರ; 5 ಸಾವಿರ ಪುಟಗಳ ಚಾರ್ಜ್‌ಶೀಟ್‌ನಲ್ಲಿ ಕೇಂದ್ರ ಸಚಿವರ ಪುತ್ರ ಆಶಿಶ್‌ ಮಿಶ್ರಾ ಪ್ರಮುಖ ಆರೋಪಿ

ಲಖನೌ(ಉತ್ತರಪ್ರದೇಶ):ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಕೋರ್ಟ್‌ಗೆ 5,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತು.

ಚಾರ್ಜ್‌ಶೀಟ್‌ನಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ. ಜೊತೆಗೆ, ಮತ್ತೊಬ್ಬ ಆರೋಪಿ ವೀರೇಂದ್ರ ಶುಕ್ಲಾ ಹೆಸರನ್ನೂ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 201ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ತಿಳಿಸಿದ್ದಾರೆ.

2021ರ ಅಕ್ಟೋಬರ್‌ 3 ರಂದು ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಲಖೀಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಅಶಿಶ್‌ ಅವರಿದ್ದರು ಎನ್ನಲಾದ ಕಾರು ರೈತರ ಹರಿದು ವ್ಯಾಪಕ ಹಿಂಸಾಚಾರ ನಡೆದಿತ್ತು. ಈ ಸಂದರ್ಭದಲ್ಲಿ ನಾಲ್ವರು ರೈತರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದರು. ಪ್ರಕರಣದಲ್ಲಿ ಆಶಿಶ್ ಮಿಶ್ರಾ ಹಾಗೂ ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಅವರ ಸೋದರಳಿಯ ಅಂಕಿತ್ ದಾಸ್ ಸೇರಿದಂತೆ ಒಟ್ಟು 13 ಮಂದಿ ಆರೋಪಿಗಳಾಗಿದ್ದಾರೆ.

ಮೂರು ಎಸ್‌ಯುವಿ ಕಾರುಗಳ ಚಾಲಕರು, ಆಶಿಶ್‌ ಮಿಶ್ರಾ ಹಾಗೂ ಅಂಕಿತ್‌ ದಾಸ್ ಅವರ ಸಹಚರರು ಸೇರಿದಂತೆ ಎಲ್ಲಾ 13 ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಸ್ತುತ ಲಖೀಂಪುರ ಖೇರಿ ಜೈಲಿನಲ್ಲಿ ಇದ್ದಾರೆ.

ಇದನ್ನೂ ಓದಿ:ಲಖೀಂಪುರ್‌ ಖೇರಿ ಹಿಂಸಾಚಾರ ಪೂರ್ವಯೋಜಿತ: ಆರೋಪಿಗಳ ವಿರುದ್ಧ ಹೊಸ ಸೆಕ್ಷನ್‌ ಸೇರಿಸಲು ಎಸ್‌ಐಟಿ ಅರ್ಜಿ

ABOUT THE AUTHOR

...view details