ಕರ್ನಾಟಕ

karnataka

ರಾಣಾ ಹುಟ್ಟುಹಬ್ಬಕ್ಕೆ ಶೀರ್ಷಿಕೆಯಿಡದ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

By

Published : Oct 15, 2022, 7:30 PM IST

ವಿಜಯ್ ಈಶ್ವರ್ ಮತ್ತು ರಾಣಾ ಕಾಂಬೋದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ.

actor rana starrer new movie poster released
ರಾಣಾ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ನಿರ್ದೇಶಕ ಪ್ರೇಮ್ ಜೊತೆಗೆ ಹಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್ ಸ್ವತಂತ್ರ ನಿರ್ದೇಶಕನಾಗಿ ಬಡ್ತಿ ಪಡೆಯಲು ಸಜ್ಜಾಗಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಏಕ್ ಲವ್ ಯಾ ಸಿನಿಮಾ ಮೂಲಕ ಸ್ಯಾಂಡಲ್​​ವುಡ್ ಅಂಗಳಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ರಕ್ಷಿತಾ ಸಹೋದರ ರಾಣಾ ತಮ್ಮ ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿ ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ವಿಜಯ್ ಈಶ್ವರ್ ಮತ್ತು ರಾಣಾ ಕಾಂಬೋದಲ್ಲಿ ಮೂಡಿ ಬರಲಿರುವ ಈ ಚಿತ್ರದ ಮೇಲೆ ಪ್ರೇಕ್ಷಕರು ಭಾರಿ ನಿರೀಕ್ಷೆಯನ್ನಿಟ್ಟುಕೊಂಡಿದ್ದಾರೆ.

ರಾಣಾ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

ಇಂದು ರಾಣಾ ಹುಟ್ಟುಹಬ್ಬ ಹಿನ್ನೆಲೆ ಚಿತ್ರತಂಡ ಮೊದಲ ಬಾರಿಗೆ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಿ ರಾಣಾಗೆ ವಿಶೇಷವಾಗಿ ಶುಭ ಕೋರಿದೆ. ಏಕ್ ಲವ್ ಯಾ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ರಾಣಾ ಈ ಬಾರಿ ಪ್ಯಾನ್ ಇಂಡಿಯಾ ಹೀರೋ ಆಗಿ ಮಿಂಚಲಿದ್ದು, ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಪೋಸ್ಟರ್ ಕೂಡ ಇಂಟ್ರೆಸ್ಟಿಂಗ್ ಆಗಿದ್ದು, ಶಾನ್ವಿ ಪ್ರೊಡಕ್ಷನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ವಿಜಯ್ ಈಶ್ವರ್ ಮತ್ತು ರಾಣಾ ಕಾಂಬೋದಲ್ಲಿ ಹೊಸ ಸಿನಿಮಾ

ಪ್ರೇಮ್ ಜೊತೆ ಸಹಾಯಕ ನಿರ್ದೇಶಕನಾಗಿ, ಬರಹಗಾರನಾಗಿ ದುಡಿದ ಅನುಭವ ಇರುವ ವಿಜಯ್ ಈಶ್ವರ್​ ಅವರಿಗೆ ಚಿತ್ರರಂಗದಲ್ಲಿ ಎಂಟು ವರ್ಷಗಳ ಅನುಭವವಿದೆ. ಮೊದಲ ಬಾರಿಗೆ ಕಥೆ ಬರೆದು ಸಿನಿಮಾ ನಿರ್ದೇಶನ ಸಾಹಸಕ್ಕೆ ಕೈ ಹಾಕಿರುವ ವಿಜಯ್ ಈಶ್ವರ್ ದೊಡ್ಡ ಮಟ್ಟದಲ್ಲಿ ಈ ಸಿನಿಮಾವನ್ನು ತೆರೆಗೆ ತರುವ ಪ್ಲಾನ್ ಮಾಡಿಕೊಂಡಿದ್ದಾರೆ. ಕಲ್ಟ್, ಮಾಸ್ ಸಬ್ಜೆಕ್ಟ್ ಒಳಗೊಂಡ ಚಿತ್ರದ ಟೈಟಲ್ ಸದ್ಯದಲ್ಲೇ ರಿವೀಲ್ ಆಗಲಿದೆ.

ಇದನ್ನೂ ಓದಿ:ರಾಣಾ ಎರಡನೇ ಸಿನಿಮಾ ನಿರ್ದೇಶಿಸಲಿದ್ದಾರೆ ಪ್ರೇಮ್ ಶಿಷ್ಯ ವಿಜಯ್ ಈಶ್ವರ್

ಚಿತ್ರದಲ್ಲಿ ರಾಣಾ ಲುಕ್ ಕಂಪ್ಲೀಟ್ ಡಿಫ್ರೆಂಟ್ ಆಗಿರಲಿದ್ದು, ಬಿಡುಗಡೆಯಾಗಿರುವ ಥೀಮ್ ಪೋಸ್ಟರ್ ಕೂಡ ಅದನ್ನೇ ಹೇಳುತ್ತಿದೆ. ಬಿಗ್ ಬಜೆಟ್​ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ತಮಿಳಿನ ಖ್ಯಾತ ನಟರೊಬ್ಬರು ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಲಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟರೊಬ್ಬರ ಗೆಸ್ಟ್ ಅಪಿಯರೆನ್ಸ್ ಕೂಡ ಸಿನಿಮಾದಲ್ಲಿರಲಿದೆ ಎನ್ನುತ್ತಾರೆ ನಿರ್ದೇಶಕರು. ಸಿನಿಮಾ ಟೈಟಲ್, ತಾಂತ್ರಿಕ ವರ್ಗ, ಎಲ್ಲದರ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

ABOUT THE AUTHOR

...view details