ಕರ್ನಾಟಕ

karnataka

Shivanna Meets CM Siddaramaiah: ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

By

Published : Jun 13, 2023, 1:23 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ದಂಪತಿ ಭೇಟಿಯಾದರು.

Shivanna Meet CM
ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್​ ಪರ ಪ್ರಚಾರ ಕಾರ್ಯ ನಡೆಸಿದ್ದ ಹ್ಯಾಟ್ರಿಕ್​ ಹೀರೋ ಶಿವರಾಜ್ ಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಜೊತೆಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾದುದಕ್ಕಾಗಿ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿದರು.

ಪತ್ನಿ ಗೀತಾ ಶಿವರಾಜ್ ಕುಮಾರ್ ಜೊತೆ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ನಟ ಶಿವರಾಜ್ ಕುಮಾರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಶಿವರಾಜ್ ಕುಮಾರ್ ದಂಪತಿಗೆ ಸ್ವಾಗತ ಕೋರಿದ ಸಿಎಂಗೆ ಪ್ರತಿಯಾಗಿ ಶಿವರಾಜ್ ಕುಮಾರ್ ದಂಪತಿ ಅಭಿನಂದನೆ ಸಲ್ಲಿಸಿದರು. ನಂತರ ಕೆಲಕಾಲ ಅನೌಪಚಾರಿಕ ಸಮಾಲೋಚನೆ ನಡೆಸಿದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ಕಾರ್ಯ ನಡೆಸಿದ್ದರು. ತಮ್ಮ ಪತ್ನಿಯ ಸಹೋದರ ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಪ್ರಚಾರ ನಡೆಸಿದ್ದ ಶಿವರಾಜ್ ಕುಮಾರ್ ನಂತರ ವರುಣಾದಲ್ಲಿಯೂ ಸಿದ್ದರಾಮಯ್ಯ ಪರ ಪ್ರಚಾರ ಕಾರ್ಯ ನಡೆಸಿ, ಮತಯಾಚನೆ ಮಾಡಿದ್ದರು.

ಸಿದ್ದರಾಮಯ್ಯ ಜೊತೆ ಕೆಲ ಕಾಲ ಮಾತುಕತೆ ನಡೆಸಿದ ಶಿವಣ್ಣ

ಇದನ್ನೂ ಓದಿ:ಟೆಕೆಟ್ ಸಿಕ್ಕಿದ್ದರೆ ಹರಿಹರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುತ್ತಿತ್ತು, ಪಿತೂರಿಯಿಂದ ನನಗೆ ಟಿಕೆಟ್ ಕೈತಪ್ಪಿದೆ: ಎಸ್.ರಾಮಪ್ಪ

ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಆ ವೇಳೆ ಭೇಟಿಯಾಗಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈಗ ಬಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಮಧು ಬಂಗಾರಪ್ಪ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದು, ಅವರೇ ಇಂದು ತಮ್ಮ ಸಹೋದರಿ ಗೀತಾ ಹಾಗು ನಟ ಶಿವರಾಜ್ ಕುಮಾರ್ ಅವರನ್ನು ಸಿಎಂ ನಿವಾಸಕ್ಕೆ ಕರೆತಂದಿದ್ದರು. ರಾಜಕೀಯ ಜಂಜಾಟ ಬದಿಗಿಟ್ಟು ಸಿಎಂ ಲೋಕಾಭಿರಾಮವಾಗಿ ಶಿವರಾಜ್ ಕುಮಾರ್ ದಂಪತಿ ಜೊತೆ ಮಾತುಕತೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

ರಾಜ್​ಕುಮಾರ್​ ಗುಣಗಾನ ಮಾಡಿದ ಸಿಎಂ: ಡಾ. ರಾಜ್​ಕುಮಾರ್ ಅವರ ಹೆಸರಲ್ಲಿ ರಾಘವೇಂದ್ರ ರಾಜ್​ಕುಮಾರ್, ಕಿರಿಯ ಪುತ್ರ ಯುವ ರಾಜ್​ಕುಮಾರ್ ಮತ್ತು ಪತ್ನಿ, ಶ್ರೀದೇವಿ ಸೇರಿ ಸ್ಥಾಪಿಸಿರುವ ಡಾ. ರಾಜ್​ಕುಮಾರ್ ಸಿವಿಲ್‌ ಸರ್ವೀಸ್‌ ಅಕಾಡೆಮಿಯನ್ನು ಸ್ಥಾಪಿಸಿದ್ದಾರೆ. 2022 ಹಾಗೂ 2023ರ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 14 ಅಭ್ಯರ್ಥಿಗಳು ಉತ್ತೀರ್ಣರಾಗುವ ಮೂಲಕ ಅಕಾಡೆಮಿಯ ಕೀರ್ತಿ ಹೆಚ್ಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕಾಡೆಮಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಂಡಿತ್ತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಈ ವೇಳೆ ರಾಜ್ ಕುಮಾರ್ ಹಾಗೂ ತಮ್ಮ ನಡುವಿನ ಒಡನಾಟದ ನೆನಪನ್ನು ಸಿದ್ದರಾಮಯ್ಯ ಮೆಲುಕು ಹಾಕಿದ್ದರು. ನಾನು ರಾಜ್ ಅವರನ್ನು ಭೇಟಿ ಮಾಡಲು ಹೋದಾಗಲೆಲ್ಲ "ಬನ್ನಿ ಬನ್ನಿ ನಮ್ ಕಾಡಿನವರು" ಎಂದು ಖುಷಿಯಿಂದ ಕರೆಯುತ್ತಿದ್ದರು. ನಾವಿಬ್ಬರೂ ಒಂದೇ ಜಿಲ್ಲೆಯವರು ಎಂದು ಸ್ಮರಿಸಿದ್ದರು.

ಇದನ್ನೂ ಓದಿ:ಸಚಿವರಾಗಿ ಬೆಳಗಾವಿಗೆ ಬಂದಿಳಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್​; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ABOUT THE AUTHOR

...view details