ಕರ್ನಾಟಕ

karnataka

ನಟ ರಾಜು ಶ್ರೀವಾಸ್ತವ್​ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಮಗಳು

By

Published : Aug 23, 2022, 5:38 PM IST

ಉತ್ತರ ಪ್ರದೇಶದ ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್​ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಅದರ ಬಗ್ಗೆ ಮಗಳು ಮಾಹಿತಿ ಹಂಚಿಕೊಂಡಿದ್ದಾರೆ.

Etv Bharat
Etv Bharat

ನವದೆಹಲಿ: ಹೃದಯಾಘಾತಕ್ಕೊಳಗಾಗಿ ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಹಾಸ್ಯ ನಟ ರಾಜು ಶ್ರೀವಾಸ್ತವ್​ ಅವರ ಆರೋಗ್ಯದ ಬಗ್ಗೆ ಅನೇಕ ಗೊಂದಲಗಳು ಮೂಡಿದ್ದು, ಇದೀಗ ಖುದ್ದಾಗಿ ಅವರ ಮಗಳು ಮಾಹಿತಿ ಹಂಚಿಕೊಂಡಿದ್ದಾರೆ. ರಾಜು ಅವರ ಪುತ್ರಿ ಅಂತರಾ ಶ್ರೀವಾಸ್ತವ್​, ತಂದೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ವದಂತಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿರುವ ಅವರು, ಮಾಧ್ಯಮಗಳಿಗೂ ವಿನಂತಿ ಮಾಡಿದ್ದಾರೆ.

ಜಿಮ್​ನಲ್ಲಿ ವರ್ಕೌಟ್ ಮಾಡ್ತಿದ್ದ ವೇಳೆ ಹೃದಯಘಾತಕ್ಕೊಳಗಾಗಿ ಕಳೆದ 15 ದಿನಗಳಿಂದ ರಾಜು ಶ್ರೀವಾಸ್ತವ್​​ ಏಮ್ಸ್​ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅವರ ಬ್ರೇನ್​ ಸಂಪೂರ್ಣವಾಗಿ ಡೆಡ್​​ ಆಗಿದೆ ಎಂದು ಹೇಳಲಾಗಿತ್ತು. ಈಗಾಗಲೇ ಅವರಿಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆಂದು ತಿಳಿಸಿದ್ದಾರೆ.

ಡಾ.ನಿತೀಶ್ ನ್ಯಾಯ್ ನೇತೃತ್ವದ ಹೃದ್ರೋಗ ಮತ್ತು ತುರ್ತು ವಿಭಾಗದ ಎಐಐಎಂಎಸ್ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ತಂದೆಗೆ ವೈದ್ಯರ ತಂಡದಿಂದ ಚಿಕಿತ್ಸೆ ಮುಂದುವರೆದಿದೆ. ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಬೇಡ. ಸಕಾರಾತ್ಮಕವಾಗಿ ಚಿಂತಿಸುವ ಶಕ್ತಿ ಬೇಕು. ಅವರು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಜಿಮ್​ ವೇಳೆ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್​ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಹಿಂದಿ ಸಿನಿಮಾಗಳಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿರುವ ರಾಜು ಶ್ರೀವಾಸ್ತವ್​, ಮೈನೆ ಪ್ಯಾರ್ ಕಿಯಾ, ಮೈನ್ ಪ್ರೇಮ್ ಕಿ ದಿವಾನಿ ಹೂ, ಆಮ್ದಾನಿ ಅಥಾನಿ ಖರ್ಚಾ ರುಪೈಯಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಇದರ ಜೊತೆಗೆ ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್ ಮತ್ತು ಬಿಗ್ ಬಾಸ್ 3 ನಂತಹ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ಮೂಲತಃ ಕಾನ್ಪುರ ಮೂಲದವರಾಗಿರುವ ಇವರು, ಉತ್ತರ ಪ್ರದೇಶ ಚಲನಚಿತ್ರ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ABOUT THE AUTHOR

...view details