ಕರ್ನಾಟಕ

karnataka

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಕೃಷ್ಣಂ ಪ್ರಣಯ ಸಖಿ' ಚಿತ್ರೀಕರಣ ಮುಕ್ತಾಯ

By ETV Bharat Karnataka Team

Published : Dec 5, 2023, 10:53 PM IST

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ.

Etv Bharatgolden-star-ganesh-starrer-krishnam-pranaya-sakhi-shooting-has-been-completed
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಕೃಷ್ಣಂ ಪ್ರಣಯ ಸಖಿ" ಸಿನಿಮಾದ ಚಿತ್ರೀಕರಣ ಮುಕ್ತಾಯ

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಸದ್ಯ ಡಬ್ಬಿಂಗ್ ನಡೆಯುತ್ತಿದೆ.

ನಟಿ ಮಾಳವಿಕ ನಾಯರ್ ಜೊತೆ ಗೋಲ್ಡನ್ ಸ್ಟಾರ್ ಗಣೇಶ್

ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್​ನಲ್ಲಿ ಪ್ರಶಾಂತ್ ಜಿ.ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. "ಕೃಷ್ಣಂ ಪ್ರಣಯ ಸಖಿ" ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರ ಬಳಗ ಸಿನಿಮಾದಲ್ಲಿದೆ.

ಕೃಷ್ಣಂ ಪ್ರಣಯ ಸಖಿ ಸಿನಿಮಾ ಚಿತ್ರೀಕರಣ ಮುಕ್ತಾಯ

ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ಹಂತದಲ್ಲಿರುವ ಕೃಷ್ಣಂ ಪ್ರಣಯ ಸಖಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ. ಈ ಚಿತ್ರ ಗಣೇಶ್​ಗೆ​ ಒಳ್ಳೆ ಹೆಸರು ತಂದು ಕೊಡಲಿದೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ:'Powder': ದಿಗಂತ್ ಅಭಿನಯದ ಪೌಡರ್ - ಮೊದಲ ಹಂತದ ಚಿತ್ರೀಕರಣ ಪೂರ್ಣ

ABOUT THE AUTHOR

...view details