ಕರ್ನಾಟಕ

karnataka

ಡಾಲಿ ಧನಂಜಯ್ ನಿರ್ಮಾಣದ 'ಟಗರು ಪಲ್ಯ' ಶೂಟಿಂಗ್​ ಕಂಪ್ಲೀಟ್​​

By

Published : Jun 1, 2023, 12:59 PM IST

ಡಾಲಿ ಧನಂಜಯ್ ನಿರ್ಮಾಣದ 'ಟಗರು ಪಲ್ಯ' ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

Tagaru Palya shooting completed
'ಟಗರು ಪಲ್ಯ' ಶೂಟಿಂಗ್​ ಕಂಪ್ಲೀಟ್​​

ಸ್ಯಾಂಡಲ್​ವುಡ್​​​ ನಟರಾಕ್ಷಸ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ಅಡಿ ನಿರ್ಮಿಸುತ್ತಿರುವ ಸಿನಿಮಾ 'ಟಗರು ಪಲ್ಯ'. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಳೆದ‌ ನವೆಂಬರ್​​ನಲ್ಲಿ ಸೆಟ್ಟೇರಿದ್ದ ಟಗರು ಪಲ್ಯ ಸಿನಿಮಾ ಶೂಟಿಂಗ್​​ ಕಂಪ್ಲೀಟ್​ ಆಗಿದೆ.

ಮಂಡ್ಯ, ಮಳವಳ್ಳಿ,‌ ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಸಿನಿಮಾಗಳನ್ನು ನಿರ್ಮಿಸಲು ಧನಂಜಯ್ ಪ್ರಾರಂಭಿಸುವ 'ಡಾಲಿ ಪಿಕ್ಚರ್ಸ್' ನಿರ್ಮಾಣ ಸಂಸ್ಥೆಯ‌ ಮೂರನೇ ಕೊಡುಗೆ 'ಟಗರು ಪಲ್ಯ'.

'ಟಗರು ಪಲ್ಯ' ಶೂಟಿಂಗ್​ ಕಂಪ್ಲೀಟ್​​

ಡಾಲಿ ಧನಂಜಯ್ ಟ್ವೀಟ್:'ಟಗರುಪಲ್ಯ ಚಿತ್ರೀಕರಣ ಮುಕ್ತಾಯ. ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ, ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜೊತೆಗೆ ರಂಗಾಯಣ ರಘು ಸರ್, ತಾರಮ್ಮ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು. ಸದ್ಯದಲ್ಲೆ ನಿಮ್ಮ ಮುಂದೆ' ಎಂದು ಡಾಲಿ ಧನಂಜಯ್ ಟ್ವೀಟ್ ಮಾಡಿದ್ದಾರೆ.

'ಟಗರು ಪಲ್ಯ' ಶೂಟಿಂಗ್​ ಕಂಪ್ಲೀಟ್​​

ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಅಮೃತಾ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾ ಕಥೆ ಕಟ್ಟಿಕೊಡಲಾಗಿದೆ.

ಸಿನಿಮಾ ಸೆಟ್ಟೇರುವ ವೇಳೆ ಡಾಲಿ ಧನಂಜಯ್ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂದು ತಿಳಿಸಿದ್ದರು. ಅದರಂತೆ ಈ ಚಿತ್ರದಲ್ಲಿ ಹೊಸಬರಿಗೆ, ಬೆಳೆಯುತ್ತಿರುವವರಿಗೆ ಅವಕಾಶ ಕಲ್ಪಿಸಲಾಗಿದೆ. ನಾಗಭೂಷಣ್ ಹಾಗು ಅಮೃತಾ ಅಲ್ಲದೇ ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ದಶಕ ಪೂರೈಸಿದ ನಟರಾಕ್ಷಸ ಡಾಲಿ ಧನಂಜಯ್

ಬಾಲ್ಯದಿಂದಲೇ ಸಿನಿಮಾ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ನಿನ್ನೆಗೆ ಹತ್ತು ವರ್ಷ ಪೂರೈಸಿದ್ದಾರೆ. ಸಾಕಷ್ಟು ಏಳು ಬೀಳು, ಟೀಕೆ ಟಿಪ್ಪಣಿ ಎದುರಿಸಿ ಸದ್ಯ ಕನ್ನಡ, ತೆಲುಗು ಚಿತ್ರರಂಗದಲ್ಲಿ ಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಸಾಫ್ಟ್ ವೇರ್ ಇಂಜಿನಿಯರ್ ಕೆಲಸ ಬಿಟ್ಟು ಬಂದು ಮಾಡಿದ ಮೊದಲ ಸಿನಿಮಾ 'ಡೈರೆಕ್ಟರ್ಸ್ ಸ್ಪೆಷಲ್'. ನಂತರದ ದಿನಗಳಲ್ಲಿ ರಾಟೆ, ಬಾಕ್ಸರ್​, ಜೆಸ್ಸಿ, ಬದ್ಮಾಶ್​, ಎರಡನೇ ಸಲ, ಅಲ್ಲಮ ಮುಂತಾದ ಚಿತ್ರಗಳನ್ನು ಮಾಡಿದರು. ಆದ್ರೆ ಯಾವುದೇ ಚಿತ್ರಗಳು ಧನಂಜಯ್​ ಅವರಿಗೆ ದೊಡ್ಡ ಮಟ್ಟದ ಬ್ರೇಕ್​ ಕೊಡಲಿಲ್ಲ. 2018ರಲ್ಲಿ ಬಂದ ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್ ಅಭಿನಯದ ಟಗರು ಚಿತ್ರದ ಡಾಲಿ ಪಾತ್ರ ನಟ ಧನಂಜಯ್​ ಅವರಿಗೆ ಡೊಡ್ಡ ಮಟ್ಟದ ಯಶಸ್ಸು ತಂದು ಕೊಟ್ಟಿತು. ಸದ್ಯ ನಿರ್ಮಾಪಕ, ನಟನಾಗಿ ಡಾಲಿ ಧನಂಜಯ್ ಬೇಡಿಕೆ ಹೊಂಡಿದ್ದಾರೆ.

ಇದನ್ನೂ ಓದಿ:ಉಚಿತ ಅಕ್ಕಿ ಕೊಟ್ಟರೆ ಸೋಮಾರಿಗಳಾಗ್ತಾರೆ ಎಂಬುದು ತಪ್ಪು ಹೇಳಿಕೆ: ಡಾಲಿ ಧನಂಜಯ್

ABOUT THE AUTHOR

...view details