ಕರ್ನಾಟಕ

karnataka

ಹೊಸ ಪ್ರತಿಭೆಗಳ ಸಿನಿಮಾದ ವಿಭಿನ್ನ ಟೈಟಲ್ ರಿವೀಲ್ ಮಾಡಿದ ನಿರ್ದೇಶಕ ಸಿಂಪಲ್ ಸುನಿ

By

Published : Jan 9, 2023, 5:55 PM IST

ವಿನಯ್ ನಿರ್ದೇಶನದ ಮೂಡಿಬರುತ್ತಿರುವ ಸಿನಿಮಾ ದಿ - ಟೈಟಲ್ ರಿವೀಲ್ ಮಾಡಿದ ನಿರ್ದೇಶಕ ಸಿಂಪಲ್ ಸುನಿ - ಲವ್ ಸ್ಟೋರಿ ಸಬ್ಜೆಕ್ಟ್ ಜೂತೆಗೆ ಡಾಲರ್ ಸುತ್ತ ನಡೆಯುವ ಕಥಾಹಂದರ ಹೊಂದಿರುವ ದಿ ಚಿತ್ರ.

title was revealed by director Simple Suni
ಹೊಸ ಪ್ರತಿಭೆಗಳ ಸಿನಿಮಾದ ವಿಭಿನ್ನ ಟೈಟಲ್ ರಿವೀಲ್ ಮಾಡಿದ ನಿರ್ದೇಶಕ ಸಿಂಪಲ್ ಸುನಿ

ಈ ಸಿನಿಮಾ ಗ್ಲ್ಯಾಮರ್ ಲೋಕಕ್ಕೆ ಟ್ಯಾಲೆಂಟ್ ಇರುವ ಪ್ರತಿಭೆಗಳ ಆಗಮನ ಗಾಂಧಿನಗರಕ್ಕೆ ಆಗ್ತಾನೆ ಇದೆ. ಇದೀಗ ಕಡೆಮನೆ ಸಿನಿಮಾ ಮೂಲಕ ಸ್ಯಾಂಡಲ್​ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ಹೊಸದೊಂದು ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಚಿತ್ರಕ್ಕೆ ‘ದಿ’ ಎಂದು ಟೈಟಲ್ ಇಡಲಾಗಿದೆ. ನಿರ್ದೇಶಕ ಸಿಂಪಲ್ ಸುನಿ ‘ದಿ’ ಟೈಟಲ್ ರಿವೀಲ್ ಮಾಡುವ ಮೂಲಕ ಚಿತ್ರತಂಡಕ್ಕೆ ಈ ಹೊಸತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

‘ದಿ’ ವಿನಯ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಎರಡನೇ ಸಿನಿಮಾ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ ಚಿತ್ರೀಕರಣವನ್ನು ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಅದರ ಮೊದಲ ಭಾಗವಾಗಿ ಚಿತ್ರದ ವಿಭಿನ್ನ ಟೈಟಲ್ ಅನ್ನು ನಿರ್ದೇಶಕ ಸಿಂಪಲ್ ಸುನಿ ಮೂಲಕ ರಿವೀಲ್ ಮಾಡಿಸಿದೆ. ಟೈಟಲ್ ರಿವೀಲ್ ಮಾಡಿ ನಿರ್ದೇಶಕ ವಿನಯ್ ಹಾಗೂ ಇಡೀ ಚಿತ್ರತಂಡಕ್ಕೆ ಸಿಂಪಲ್ ಸುನಿ ಶುಭ ಕೋರಿದ್ದಾರೆ. ಸದ್ಯದಲ್ಲೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ನಾಯಕ, ನಾಯಕಿ ಯಾರು ಎಂಬುದನ್ನು ಚಿತ್ರತಂಡ ರಿವೀಲ್ ಮಾಡಲಿದೆ.

ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಡಾಲರ್ ಸುತ್ತ ನಡೆಯುವ ಕಥಾಹಂದರ ಒಳಗೊಂಡಿದೆ. ಹರಿಣಿ, ಬಾಲ ರಾಜ್ವಾಡಿ, ನಾಗೇಂದ್ರ ಅರಸ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರು, ಶರಣ್, ಸುರೇಶ್ ಬಾಬು, ಗಣೇಶ್, ಕಲಾರತಿ ಮಹದೇವ್ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ. ಶೀಘ್ರದಲ್ಲೇ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್​ ಮಾಡಿಕೊಂಡಿದೆ

‘ವಿಡಿಕೆ’ ಸಿನಿಮಾಸ್ ಬ್ಯಾನರ್ ನಡಿ ‘ವಿಡಿಕೆ’ ಗ್ರೂಪ್ 'ದಿ' ಚಿತ್ರವನ್ನು ನಿರ್ಮಾಣ ಮಾಡಿದೆ. ತುಮಕೂರು, ಮೈಸೂರು, ಮೂಡುಗೆರೆ, ಚಿಕ್ಕಮಗಳೂರು, ಹೊನ್ನಾವರ, ಉತ್ತರ ಕನ್ನಡ, ಬೆಂಗಳೂರು, ಕೇರಳದಲ್ಲಿ ‘ದಿ’ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಆಲನ್ ಭರತ್ ಕ್ಯಾಮೆರಾ ವರ್ಕ್, ಯುಎಂ ಸ್ಟೀವನ್ ಸತೀಶ್ ಸಂಗೀತ ನಿರ್ದೇಶನ, ಕವಿರಾಜ್ ಹಾಗೂ ವಿನಯ್ ಸಾಹಿತ್ಯ, ಸಿದ್ದಾರ್ಥ ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಚಿತ್ರತಂಡ ಫೆಬ್ರವರಿ ಕೊನೆಯ ವಾರ ಸಿನಿಮಾ ತೆರೆಗೆ ತರುವ ತಯಾರಿಯಲ್ಲಿದೆ.

ವಿನಯ್ ರಾಜ್​ಕುಮಾರ್ ಸಿನಿಮಾಗೆ ಸುನಿ ನಿರ್ದೇಶನ: ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಕ್ಸಸ್​ಫುಲ್ ನಿರ್ದೇಶಕನಾಗಿ ಹೊರ ಹೊಮ್ಮಿರುವ ಡೈರೆಕ್ಟರ್​ ಸಿಂಪಲ್ ಸುನಿ. ಆಪರೇಷನ್ ಅಲಮೆಲಮ್ಮ ಹಾಗು ಚಮಕ್ ಅಂತಹ ಯಶಸ್ವಿ ಚಿತ್ರಗಳ ಬಳಿಕ ನಟ ಶರಣ್ ಜೊತೆ ಅವತಾರ ಪುರುಷ ಸಿಮಿಮಾ ಮಾಡಿದರು. ‌ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಬಂದ ಅವತಾರ ಪುರುಷ ಸಿನಿಮಾ ಪ್ರೇಕ್ಷಕರಿಗೆ ಹೇಳುವಷ್ಟರ ಮಟ್ಟಿಗೆ ಇಷ್ಟ ಆಗಲಿಲ್ಲ.

ಕೊಂಚ ಬ್ರೇಕ್ ಬಳಿಕ ನಿರ್ದೇಶಕ ಸಿಂಪಲ್ ಸುನಿ ಇದೀಗ ಹೊಸದೊಂದು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ, ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್​ಕುಮಾರ್​ ಅವರಿಗೆ ಸಿಂಪಲ್ ಸುನಿ ನಿರ್ದೇಶನದ ಕ್ಯಾಪ್‌ ತೊಟ್ಟಿದ್ದಾರೆ.

ಇದನ್ನೂ ಓದಿ:ಶಾಕುಂತಲಂ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ.. ವೇದಿಕೆ ಮೇಲೆಯೇ ಕಣ್ಣೀರಿಟ್ಟ ನಟಿ ಸಮಂತಾ

ABOUT THE AUTHOR

...view details