ಕರ್ನಾಟಕ

karnataka

ಅಂತಾರಾಷ್ಟ್ರೀಯ ಕೋರ್ಟ್‌ನಲ್ಲಿ ರಷ್ಯಾ ವಿರುದ್ಧ ಭಾರತದ ನ್ಯಾಯಮೂರ್ತಿಗಳ ಮತ ಚಲಾವಣೆ

By

Published : Mar 17, 2022, 9:06 AM IST

Indian judge Dalveer Bhandari votes against Russia for Invading Ukraine
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ಭಾರತದ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಮತ ಚಲಾವಣೆ ()

ಭಾರತದ ನ್ಯಾಯಾಧೀಶರಾದ ದಲ್ವೀರ್ ಭಂಡಾರಿ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಷ್ಯಾದ ವಿರುದ್ಧ ಮತ ಚಲಾಯಿಸಿದ್ದಾರೆ.

ವಾಷಿಂಗ್ಟನ್: ಉಕ್ರೇನ್ ಮತ್ತು ರಷ್ಯಾ ನಡುವಿನ ಬಿಕ್ಕಟ್ಟು ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತದ ನ್ಯಾಯಾಧೀಶರಾದ ದಲ್ವೀರ್ ಭಂಡಾರಿ ಅವರು ರಷ್ಯಾದ ವಿರುದ್ಧ ಮತ ಚಲಾಯಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು 13 ನ್ಯಾಯಾಧೀಶರು ಬೆಂಬಲಿಸಿದ್ದಾರೆ.

ಕಳೆದ ಫೆಬ್ರವರಿ 24 ರಂದು ಉಕ್ರೇನ್ ಭೂಪ್ರದೇಶದಲ್ಲಿ ರಷ್ಯಾ ಸೇನೆ ಪ್ರಾರಂಭಿಸಿರುವ ಕಾರ್ಯಾಚರಣೆಗಳನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಐಸಿಜೆ ಅಧ್ಯಕ್ಷರಾದ ನ್ಯಾಯಾಧೀಶ ಜೋನ್ ಡೊನೊಗ್ಯು ತಿಳಿಸಿದ್ದಾರೆ. ಪ್ರಕರಣದ ಅಂತಿಮ ತೀರ್ಮಾನ ಇನ್ನೂ ಬಾಕಿ ಇದೆ. ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶವನ್ನು ಅಮೆರಿಕ ಸ್ವಾಗತಿಸಿದ್ದು, ಉಕ್ರೇನ್‌ನಲ್ಲಿ ರಷ್ಯಾ ತನ್ನ ಸೇನಾ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಒತ್ತಾಯಿಸಿದೆ.

ಐಸಿಜೆ ಮಹತ್ವದ ತೀರ್ಪು ನೀಡಿದೆ ಎಂದು ವಿವರಿಸಿದ ಯುಎಸ್‌ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್, ಅಂತಾರಾಷ್ಟ್ರೀಯ ನ್ಯಾಯಾಲಯ ಸ್ಪಷ್ಟವಾಗಿ ಮತ್ತು ನಿಸ್ಸಂದಿಗ್ಧವಾಗಿ ರಷ್ಯಾ ತನ್ನ ಮಿಲಿಟರಿ ಕಾರ್ಯಾಚರಣೆ ತಕ್ಷಣವೇ ಸ್ಥಗಿತಗೊಳಿಸುವಂತೆ ಆದೇಶಿಸಿದೆ ಎಂದು ಹೇಳಿದ್ದಾರೆ.

ನಾವು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ. ಆದೇಶ ಅನುಸರಿಸಲು ರಷ್ಯಾದ ಒಕ್ಕೂಟಕ್ಕೆ ಕರೆ ನೀಡುತ್ತೇವೆ. ತಕ್ಷಣವೇ ಉಕ್ರೇನ್‌ನಲ್ಲಿ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಿ ಮತ್ತು ಉಕ್ರೇನ್‌ನಲ್ಲಿ ಅಡೆತಡೆಯಿಲ್ಲದ ಮಾನವೀಯ ಪ್ರವೇಶಕ್ಕೆ ಅನುಕೂಲ ಮಾಡಿಕೂಡಬೇಕು ಎಂದಿದ್ದಾರೆ.

ಇದನ್ನೂ ಓದಿ:ಖೇರ್ಸನ್​​ ವಿಮಾನ ನಿಲ್ದಾಣದ ಮೇಲೆ ಉಕ್ರೇನಿಯನ್​ ಪಡೆಗಳ ದಾಳಿ: ಎರಡೂ ಪಡೆಗಳ ನಡುವೆ ಭೀಕರ ಕಾಳಗ

ABOUT THE AUTHOR

...view details