ಕರ್ನಾಟಕ

karnataka

ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ..1000ಕ್ಕೂ ಹೆಚ್ಚು ಜನ ಸಾವು, ಅವಶೇಷಗಳಡಿ ಸಿಲುಕಿದ ನೂರಾರು ಜನ!

By

Published : Jun 22, 2022, 11:12 AM IST

Updated : Jun 22, 2022, 5:21 PM IST

ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ.. 1000 ಕ್ಕೂ ಹೆಚ್ಚು ಜನ ಸಾವು, ಅವಶೇಷಗಳಡಿ ಸಿಲುಕಿದ ನೂರಾರು ಜನ!

ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ ಸಂಭವಿಸಿದ್ದು, ಈಗಾಗಲೇ 1000ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅವಶೇಷಗಳಡಿ ನೂರಾರು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕಾಬೂಲ್:ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಪೂರ್ವ ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದಲ್ಲಿ ಉಂಟಾದ ಭೂಕಂಪದಲ್ಲಿ ಕನಿಷ್ಠ 1000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟಿತ್ತು. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಹೆಲಿಕಾಪ್ಟರ್‌ಗಳ ಮೂಲಕ ರಕ್ಷಣಾ ಪಡೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. 90ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದ್ದು, ಅವಶೇಷಗಳಡಿ ಹಲವರು ಸಿಲುಕಿಕೊಂಡಿದ್ದಾರೆ. ಹಾಗೆ 600ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 44 ಕಿಲೋಮೀಟರ್ ದೂರದಲ್ಲಿ 51 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ:ಜಮ್ಮು-ಕಾಶ್ಮೀರದಲ್ಲಿ 4.7ರ ತೀವ್ರತೆಯ ಭೂಕಂಪನ

ತಾಲಿಬಾನ್ ಸರ್ಕಾರದ ವಕ್ತಾರ ಬಿಲಾಲ್ ಕರಿಮಿ ಈ ಕುರಿತು ಟ್ವೀಟ್ ಮಾಡಿ, ಭೂಕಂಪನಿಂದಾಗಿ ಪಕ್ಟಿಕಾ ಪ್ರಾಂತ್ಯದ ನಾಲ್ಕು ಪ್ರದೇಶಗಳಲ್ಲಿ ಹಾನಿಯಾಗಿದ್ದು, ನೂರಾರು ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದರು.

ಪಾಕಿಸ್ತಾನದಲ್ಲೂ ಭೂಕಂಪ..!:ಮತ್ತೊಂದೆಡೆ ಪಾಕಿಸ್ತಾನದಲ್ಲೂ ಹಲವೆಡೆ ಭೂಮಿ ಕಂಪಿಸಿದೆ. ಪೇಶಾವರ, ಇಸ್ಲಾಮಾಬಾದ್, ಲಾಹೋರ್ ಮತ್ತು ಪಂಜಾಬ್ ಪ್ರಾಂತ್ಯದ ಹಲವು ಭಾಗಗಳಲ್ಲಿ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.

Last Updated :Jun 22, 2022, 5:21 PM IST

ABOUT THE AUTHOR

...view details