ಕರ್ನಾಟಕ

karnataka

ಇದಪ್ಪಾ ಭಾಷಾಭಿಮಾನ! ಕೆನಡಾ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಂಪು ಸೂಸಿದ ಚಂದ್ರ ಆರ್ಯ

By

Published : May 20, 2022, 11:12 AM IST

Chandra Arya

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಅಲ್ಲಿನ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು, ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನಾಡಿ ಹೊಸ ಇತಿಹಾಸ ಬರೆದರು.

ಕೆನಡಾ: ದೇಶದ ಐತಿಹಾಸಿಕ ಮಹತ್ವದ ಪ್ರಧಾನ ಭಾಷೆಗಳಲ್ಲಿ ಕನ್ನಡವೂ ಒಂದಾಗಿದ್ದು, ಕರ್ನಾಟಕದ ಬಹುತೇಕ ಜನರ ಮಾತೃಭಾಷೆ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗೋವಾ, ದಮನ್ ಹಾಗೂ ದಿಯುಗಳಲ್ಲೂ ಕನ್ನಡವನ್ನು ಮಾತೃ ಭಾಷೆಯಾಗಿ ಬಳಸುವ ಗಣನೀಯ ಸಂಖ್ಯೆಯ ಜನರಿದ್ದಾರೆ. ಇದೀಗ ಸಪ್ತ ಸಾಗರದಾಚೆಗಿನ ಕೆನಡಾ ಸಂಸತ್ತಿನಲ್ಲಿ ಕೂಡ ಕನ್ನಡದ ಕಂಪು ಪಸರಿಸಿದೆ.

ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ಅಲ್ಲಿನ ಸಂಸತ್​ನಲ್ಲಿ ಕನ್ನಡದಲ್ಲೇ ಮಾತನಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದು ಕೆನಡಾ ಪಾರ್ಲಿಮೆಂಟ್​ನಲ್ಲಿ ಭಾಷಣ ಮಾಡಿದರು. ಬೇರೆ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

'ಈ ಸುಂದರ ಭಾಷೆ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ಭಾಷೆಯನ್ನು‌ 5 ಕೋಟಿ ಜನರು ಮಾತನಾಡುತ್ತಾರೆ' ಎಂದು ಹೇಳುವ ಮೂಲಕ ಅವರು ಭಾಷಾಭಿಮಾನ ಮೆರೆದರು. ನಂತರ ಕುವೆಂಪು ರಚನೆಯ ಮತ್ತು ಡಾ.ರಾಜಕುಮಾರ್ ಹಾಡಿರುವ ಭಾವಗೀತೆಯಾದ 'ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು' ಎಂದು ಹೇಳುವ ಮೂಲಕ ತಮ್ಮ ಭಾಷಣ ಮುಗಿಸಿದರು.

ಚಂದ್ರ ಆರ್ಯ ಅವರ ಮಾತೃ ಭಾಷಾಭಿಮಾನಕ್ಕೆ ಇಡೀ ಕರ್ನಾಟವೇ ಪ್ರಶಂಸೆ ವ್ಯಕ್ತಪಡಿಸಿದೆ. ಸಚಿವೆ ಶಶಿಕಲಾ ಜೊಲ್ಲೆ ಟ್ವೀಟ್ ಮಾಡಿ, 'ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗರಾದ ಶ್ರೀ ಚಂದ್ರ ಆರ್ಯ ಅವರು ಕೆನಡಾ ಸಂಸತ್ತಿನಲ್ಲಿ ನಮ್ಮ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ​ಹೇಳಿದ್ದಾರೆ.

ಇದನ್ನೂ ಓದಿ:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ABOUT THE AUTHOR

...view details