ಕರ್ನಾಟಕ

karnataka

ಶಸ್ತ್ರಾಸ್ತ್ರಗಳನ್ನು ಖರೀದಿಸಲು ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸಬೇಕು : ಜೋ ಬೈಡನ್​​

By

Published : Jun 3, 2022, 9:35 AM IST

ಮಕ್ಕಳು, ಕುಟುಂಬಗಳನ್ನು ರಕ್ಷಿಸುವ ಸಲುವಾಗಿ ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸುವ ಅಗತ್ಯವಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಹೇಳಿದರು..

Biden
ಜೋ ಬೈಡನ್

ವಾಷಿಂಗ್ಟನ್ :ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಗುಂಡಿನ ದಾಳಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಧ್ಯಕ್ಷ ಜೋ ಬೈಡನ್, ಮಕ್ಕಳು ಮತ್ತು ಕುಟುಂಬಗಳನ್ನು ರಕ್ಷಿಸುವ ಸಲುವಾಗಿ ಯುಎಸ್ ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸುವ ಅಗತ್ಯವಿದೆ. ಹಾಗಾಗಿ, ಶಸ್ತ್ರಾಸ್ತ್ರಗಳನ್ನು ಖರೀದಿಸಲು ಕನಿಷ್ಠ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸಬೇಕು ಎಂದು ಹೇಳಿದರು.

ಶ್ವೇತಭವನದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, "ನಾವು ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸಬೇಕಾಗಿದೆ. ನಮಗೆ ಸಾಧ್ಯವಾಗದಿದ್ದರೆ, ಅವುಗಳನ್ನು ಖರೀದಿಸಲು ವಯಸ್ಸನ್ನು ಹೆಚ್ಚಿಸಬೇಕು. ಜತೆಗೆ ಬಂದೂಕು ತಯಾರಕರ ಹೊಣೆಗಾರಿಕೆಯಿಂದ ವಿನಾಯಿತಿಯನ್ನು ರದ್ದುಗೊಳಿಸಿ ಎಂದರು.

ಇದು ಯಾರ ಹಕ್ಕುಗಳನ್ನು ಕಸಿದುಕೊಳ್ಳುವ ಬಗ್ಗೆ ಅಲ್ಲ, ಇದು ನಮ್ಮ ಮಕ್ಕಳನ್ನು, ಕುಟುಂಬಗಳನ್ನು ಹಾಗೂ ಸಮುದಾಯಗಳನ್ನು ರಕ್ಷಿಸುವ ಬಗ್ಗೆ. ಅಲ್ಲದೇ ಶಾಲೆಗೆ, ಕಿರಾಣಿ ಅಂಗಡಿಗೆ ಹಾಗೂ ಚರ್ಚ್‌ಗೆ ಹೋಗಲು ನಮ್ಮ ಸ್ವಾತಂತ್ರ್ಯವನ್ನು ರಕ್ಷಿಸುವ ಬಗೆ ಎಂದರು.

ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ :ಮೇ 24ರಂದು ಟೆಕ್ಸಾಸ್‌ನ ಉವಾಲ್ಡೆಯಲ್ಲಿರುವ ರಾಬ್ ಎಲಿಮೆಂಟರಿ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಇದರಲ್ಲಿ 19 ಮಕ್ಕಳು ಸೇರಿದಂತೆ ಹಲವಾರು ಜನರು ಸಾವನ್ನಪ್ಪಿದರು. ಸಿಎನ್‌ಎನ್ ಪ್ರಕಾರ, ಫ್ಲೋರಿಡಾದ ಪಾರ್ಕ್‌ಲ್ಯಾಂಡ್‌ನಲ್ಲಿ 2018ರಲ್ಲಿ ಮಾರ್ಜೊರಿ ಸ್ಟೋನ್‌ಮ್ಯಾನ್ ಡೌಗ್ಲಾಸ್ ಹೈಸ್ಕೂಲ್ ಗುಂಡಿನ ದಾಳಿಯ ನಂತರ ಇದು ಅತ್ಯಂತ ಭೀಕರ ದಾಳಿಯಾಗಿದೆ. ಅಲ್ಲಿ 17 ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ:ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ: 18 ಮಕ್ಕಳು ಸೇರಿ 21 ಮಂದಿ ಕೊಲೆ, ಹಂತಕನ ಹತ್ಯೆ!

ಗುಂಡಿನ ದಾಳಿಯ ಇತರ ಕೆಲ ಪ್ರಕರಣ : ಮೇ 31 ರಂದು, ನ್ಯೂ ಓರ್ಲಿಯನ್ಸ್‌ನಲ್ಲಿ ಪ್ರೌಢಶಾಲಾ ಪದವಿ ಸಮಾರಂಭದಲ್ಲಿ ಗುಂಡೇಟಿನಿಂದ ಓರ್ವ ವೃದ್ಧೆ ಸಾವನ್ನಪ್ಪಿ, ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದರು. ಹಾಗೆ ಜೂನ್ 1ರಂದು ಆಸ್ಪತ್ರೆಯ ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದರು.

ABOUT THE AUTHOR

...view details