ಕರ್ನಾಟಕ

karnataka

ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ: ಭಾರತ, ಬ್ರೆಜಿಲ್‌ಗೆ ರಷ್ಯಾ ಬೆಂಬಲ

By

Published : Sep 25, 2022, 1:26 PM IST

ಯುಎನ್ ಸೆಕ್ಯುರಿಟಿ ಕೌನ್ಸಿಲ್‌ನಲ್ಲಿ ಕಾಯಂ ಸದಸ್ಯತ್ವ ಪಡೆಯಲು ಭಾರತ ಮತ್ತು ಬ್ರೆಜಿಲ್​ ಅರ್ಹ ಅಭ್ಯರ್ಥಿಗಳೆಂದು ರಷ್ಯಾ ಹೇಳಿದೆ. ಈ ಮೂಲಕ ರಷ್ಯಾ ಭಾರತ ವಿಶ್ವಸಂಸ್ಥೆಯಲ್ಲಿ ಕಾಯಂ ಸದಸ್ಯತ್ವ ಪಡೆಯಲು ತನ್ನ ಬೆಂಬಲವನ್ನು ಸೂಚಿಸಿದೆ.

UN Security Council
ಸಾಮಾನ್ಯ ಸಭೆ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆಯಲು ಭಾರತ ಮತ್ತು ಬ್ರೆಜಿಲ್ ಅರ್ಹ ಅಭ್ಯರ್ಥಿಗಳು ಎನ್ನುವ ಮೂಲಕ ರಷ್ಯಾ ತನ್ನ ಬೆಂಬಲವನ್ನು ವ್ಯಕ್ತಪಡಿಸಿದೆ. ಯುಎನ್ ಜನರಲ್ ಅಸೆಂಬ್ಲಿಯ 77 ನೇ ಸಾಮಾನ್ಯ ಸಭೆಯಲ್ಲಿ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಶನಿವಾರ ಭಾರತಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್, ಯುಎನ್ ಮತ್ತು ಭದ್ರತಾ ಮಂಡಳಿ ಸಮಕಾಲೀನ ವಾಸ್ತವಗಳಿಗೆ ತಕ್ಕಂತೆ ನಡೆಯಬೇಕು ಎಂದು ಹೇಳಿದರು. ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್ ಅಮೆರಿಕದ ರಾಷ್ಟ್ರಗಳನ್ನು ಸೇರಿಸಿಕೊಳ್ಳುವ ಮೂಲಕ ಭದ್ರತಾ ಮಂಡಳಿಯನ್ನು ಮತ್ತಷ್ಟು ಪ್ರಜಾಸತ್ತಾತ್ಮಕವಾಗಿಸುವುದನ್ನು ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದರು.

ಭಾರತ ಮತ್ತು ಬ್ರೆಜಿಲ್ ಪ್ರಮುಖ ಅಂತಾರಾಷ್ಟ್ರೀಯ ಪಾಲುದಾರರು ಹಾಗೂ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆಯಲು ಅವರು ಅರ್ಹರು ಎಂದಿದ್ದಾರೆ. ಭದ್ರತಾ ಮಂಡಳಿಯ ತುರ್ತು ದೀರ್ಘಾವಧಿಯ ಸುಧಾರಣೆಗೆ ಪ್ರಯತ್ನಿಸುತ್ತಿರುವುದರಲ್ಲಿ ಭಾರತ ಮುಂಚೂಣಿಯಲ್ಲಿದೆ. ಹಾಗಾಗಿ ಭಾರತ ಖಾಯಂ ಸದಸ್ಯ ರಾಷ್ಟ್ರವಾಗಬಹುದು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ:ರಷ್ಯಾ ಉಕ್ರೇನ್ ಮಧ್ಯೆ ಮೋದಿ ಮಾತ್ರ ಶಾಂತಿ ಸ್ಥಾಪಿಸಬಲ್ಲರು: ಮೆಕ್ಸಿಕೊ

ಇದೇ ವೇಳೆ ಅವರು ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾರ್ಯಾಚರಣೆಯನ್ನು ಜನಾಭಿಪ್ರಾಯ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ.

ಪ್ರಸ್ತುತ, UNSC ಐದು ಖಾಯಂ ಸದಸ್ಯ ರಾಷ್ಟ್ರಗಳು ಮತ್ತು 10 ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ. ಇವುಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಿಂದ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಐದು ಖಾಯಂ ಸದಸ್ಯ ರಾಷ್ಟ್ರಗಳೆಂದರೇ, ರಷ್ಯಾ, ಯುಕೆ, ಚೀನಾ, ಫ್ರಾನ್ಸ್ ಮತ್ತು ಯುನೈಟೆಡ್ ಸ್ಟೇಟ್ಸ್​​.

ABOUT THE AUTHOR

...view details