ಕರ್ನಾಟಕ

karnataka

ಕೊಪ್ಪಳದಲ್ಲಿ ಬೆಳ್ಳಂಬೆಳಗ್ಗೆ ದುರಂತ:  ಪವರ್​ ಶಾಕ್​ಗೆ ತಂದೆ-ಮಕ್ಕಳು ಬಲಿ

By

Published : Sep 13, 2019, 10:31 AM IST

Updated : Sep 13, 2019, 11:31 AM IST

ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ವಿದ್ಯುತ್​ ಅವಘಡ ಸಂಭವಿಸಿದೆ. ಬೆಳ್ಳಂಬೆಳಗ್ಗೆ ವಿದ್ಯುತ್ ಸ್ಪರ್ಶದಿಂದ ತಂದೆ ಹಾಗೂ ಇಬ್ಬರು ಮಕ್ಕಳು ಬಲಿಯಾಗಿದ್ದಾರೆ. ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ.

ವಿದ್ಯುತ್ ಸ್ಪರ್ಶಕ್ಕೆ ತಂದೆ ಮಕ್ಕಳು ಬಲಿ

ಕೊಪ್ಪಳ: ಜಿಲ್ಲೆಯಲ್ಲಿ ಬೆಳ್ಳಂ ಬೆಳಗ್ಗೆ ವಿದ್ಯುತ್ ಅವಘಡ ಸಂಭವಿಸಿದ್ದು, ತಂದೆ ಹಾಗೂ ಇಬ್ಬರು ಮಕ್ಕಳು ವಿದ್ಯುತ್ ಸ್ಪರ್ಶಕ್ಕೆ ಬಲಿಯಾದ ಘಟನೆ ಕುಷ್ಟಗಿ ತಾಲೂಕಿನ ಚಳಗೇರಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.

ವಿದ್ಯುತ್ ಸ್ಪರ್ಶಕ್ಕೆ ತಂದೆ ಮಕ್ಕಳು ಬಲಿ

ಹನುಮಂತಪ್ಪ ಮಲ್ಲಪ್ಪ ಬೀರಪ್ಪನವರ (30) ಹಾಗೂ ಮಕ್ಕಳಾದ ಬೀರೇಶ (3) ಹಾಗೂ ಪ್ರಿಯಾಂಕ (2) ವಿದ್ಯುತ್ ಸ್ಪರ್ಶಿಸಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸೂರ್ಯಕಾಂತಿ ಬೆಳೆ ರಾಶಿ ಮಾಡಲು ಹೊಲಕ್ಕೆ ಹೋಗಿದ್ದಾಗ ಟ್ರ್ಯಾಕ್ಟರ್ ಮೇಲೆ ವಿದ್ಯುತ್ ತಂತಿ ಕಟ್ ಆಗಿ ಬಿದ್ದು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಕುಷ್ಟಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Last Updated : Sep 13, 2019, 11:31 AM IST

ABOUT THE AUTHOR

...view details