ಕರ್ನಾಟಕ

karnataka

ಮರಣೋತ್ತರ ಪರೀಕ್ಷೆ.. ನಟ ಸಿದ್ಧಾರ್ಥ್ ಶುಕ್ಲಾ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ

By

Published : Sep 3, 2021, 2:31 PM IST

'ಬಾಲಿಕಾ ವಧು' ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದು, ಹಿಂದಿಯ ಬಿಗ್​ಬಾಸ್​ ಸೀಸನ್​-13 ವಿಜೇತರಾಗಿದ್ದ ಸಿದ್ಧಾರ್ಥ್ ಶುಕ್ಲಾ ನಿನ್ನೆ ನಿಧನರಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮುಂಬೈನ ಅವರ ನಿವಾಸಕ್ಕೆ ಮೃತದೇಹ ರವಾನೆಯಾಗಿದೆ. ಬಾಲಿವುಡ್​​ನ ಹಲವು ನಟರು ಅಂತಿಮ ನಮನ ಸಲ್ಲಿಸಿದ್ದಾರೆ..

ಸಿದ್ಧಾರ್ಥ್ ಶುಕ್ಲಾ
ಸಿದ್ಧಾರ್ಥ್ ಶುಕ್ಲಾ

ಮುಂಬೈ :ಹೃದಯಾಘಾತದಿಂದ ಕೊನೆಯುಸಿರೆಳಿದಿದ್ದ ಕಿರುತರೆ ಹಾಗೂ ಚಲನಚಿತ್ರ ನಟ ಸಿದ್ಧಾರ್ಥ್ ಶುಕ್ಲಾ (40)ರ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ.

ನಿನ್ನೆ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಶವದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿದ್ದರೂ ನಿಖರ ಕಾರಣವನ್ನು ಇನ್ನೂ ಪತ್ತೆ ಹಚ್ಚಲಾಗುತ್ತಿದೆ. ಹಿಸ್ಟೊಪಾಥಾಲಜಿ ಬಳಿಕ ಕಾರಣ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ನಟ, ಬಿಗ್​​ ಬಾಸ್​ ವಿಜೇತ ಸಿದ್ಧಾರ್ಥ್ ಶುಕ್ಲಾ ಇನ್ನಿಲ್ಲ..!

'ಬಾಲಿಕಾ ವಧು' ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದು, ಹಿಂದಿಯ ಬಿಗ್​ಬಾಸ್​ ಸೀಸನ್​-13 ವಿಜೇತರಾಗಿದ್ದ ಸಿದ್ಧಾರ್ಥ್ ಶುಕ್ಲಾ ನಿನ್ನೆ ನಿಧನರಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮುಂಬೈನ ಅವರ ನಿವಾಸಕ್ಕೆ ಮೃತದೇಹ ರವಾನೆಯಾಗಿದೆ. ಬಾಲಿವುಡ್​​ನ ಹಲವು ನಟರು ಅಂತಿಮ ನಮನ ಸಲ್ಲಿಸಿದ್ದಾರೆ. ಕೆಲವೇ ಹೊತ್ತಲ್ಲಿ ಮುಂಬೈನ ಓಶಿವಾರಾ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.

ABOUT THE AUTHOR

...view details