ದುಬೈ: ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಭಾನುವಾರ ನಡೆಯುವ ಸೂಪರ್ 12 ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ಆದರೆ, ಪಾಕ್ ಮ್ಯಾನೇಜ್ಮೆಂಟ್ ಶನಿವಾರವೇ ನಾಳೆಯ ಪಂದ್ಯಕ್ಕಾಗಿ 12 ಸದಸ್ಯರ ಬಳಗವನ್ನು ಪ್ರಕಟಿಸಿದೆ.
ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯಬ್ ಮಲಿಕ್, ಆಸಿಫ್ ಅಲಿ, ಹೈದರ್ ಅಲಿ, ಇಮಾದ್ ವಸೀಂ, ಶದಬ್ ಖಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರವೂಫ್
ಭಾರತ ಮತ್ತು ಪಾಕಿಸ್ತಾನ ತಂಡಗಳು 2ನೇ ಗುಂಪಿನಲ್ಲಿದ್ದು, ಭಾನುವಾರ ಸಂಜೆ 7:30 ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
Last Updated :Oct 23, 2021, 5:10 PM IST