ಕರ್ನಾಟಕ

karnataka

2nd T20 ಪಂದ್ಯ ; ಭಾರತ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ವೆಸ್ಟ್ ಇಂಡೀಸ್

By

Published : Feb 18, 2022, 6:57 PM IST

ಇಲ್ಲಿನ ಈಡನ್ ಗಾರ್ಡನ್‌ನಲ್ಲಿ ಇಂದು ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ..

West Indies win toss, elect to field against India
West Indies win toss, elect to field against India

ಕೋಲ್ಕತ್ತಾ :ಟೀಂ ಇಂಡಿಯಾ ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಮೊದಲು ಫೀಲ್ಡ್‌ ಮಾಡಲು ಆಯ್ಕೆ ಮಾಡಿಕೊಂಡಿದೆ. ಎಂದಿನಂತೆ ಉಭಯ ತಂಡಗಳು ಕೆಲವು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿಯುತ್ತಿವೆ.

ಇತ್ತೀಚೆಗೆ ನಡೆದ 3 ಏಕದಿನ ಪಂದ್ಯದಲ್ಲಿ 3-0 ಅಂತರಿಂದ ಗೆಲುವು ಸಾಧಿಸುವ ಮೂಲಕ ಎದುರಾಳಿ ತಂಡವನ್ನು ವೈಟ್​ ವಾಷ್​ ಮಾಡಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಟಿ20 ಪಂದ್ಯದಲ್ಲೂ ಅದೇ ಖದರ್​ ಮುಂದುವರೆಸಿದೆ. ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ಇಂದಿನ ಪಂದ್ಯದಲ್ಲಿ ಕೀರನ್ ಪೊಲಾರ್ಡ್ ನೇತೃತ್ವದ ಎದುರಾಳಿ ತಂಡ ವೆಸ್ಟ್ ಇಂಡೀಸ್ ಸೋಲಿನ ಸುಳಿಯಿಂದ ತಪ್ಪಿಸಿಕೊಳ್ಳುವ ಮೂಲಕ ಈ ಒತ್ತಡದಿಂದ ಪಾರಾಗುತ್ತಾ ಅಥವಾ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾಗೆ ಶರಣಾಗುತ್ತಾ ಅನ್ನೋದನ್ನು ಕಾಡುನೋಡಬೇಕು.

ತಂಡಗಳು ಹೀಗಿವೆ :

ಭಾರತ (ಆಡುವ XI): ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್

ವೆಸ್ಟ್ ಇಂಡೀಸ್ (ಪ್ಲೇಯಿಂಗ್ XI):ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೆಟ್​ ಕೀಪರ್​), ರೋವ್‌ಮನ್ ಪೊವೆಲ್, ಕೀರಾನ್ ಪೊಲಾರ್ಡ್ (ನಾಯಕ), ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್, ರೋಸ್ಟನ್ ಚೇಸ್, ಅಕೆಲ್ ಹೋಸೇನ್, ರೊಮಾರಿಯೋ ಶೆಫರ್ಡ್, ಶೆಲ್ಡನ್ ಕಾಟ್ರೆಲ್.

ABOUT THE AUTHOR

...view details