ಕರ್ನಾಟಕ

karnataka

ಸುಪ್ರೀಂ ತೀರ್ಪು ಹಿನ್ನಡೆಯಲ್ಲ, ಪ್ರತಿಭಟನೆ ಮುಂದುವರಿಯುತ್ತದೆ: ಕುಸ್ತಿಪಟುಗಳ ಹೇಳಿಕೆ

By

Published : May 4, 2023, 10:27 PM IST

ಅಪ್ರಾಪ್ತೆ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

Supreme Court
ಸುಪ್ರೀಂ ಕೋರ್ಟ್‌

ನವದೆಹಲಿ:ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಅರ್ಜಿಯ ವಿಚಾರಣೆಯನ್ನು ಮುಕ್ತಾಯಗೊಳಿಸುವ ಸುಪ್ರೀಂ ಕೋರ್ಟ್‌ನ ನಿರ್ಧಾರವು ಹಿನ್ನಡೆಯಲ್ಲ ಎಂದು ಪ್ರತಿಪಾದಿಸಿರುವ ಕುಸ್ತಿಪಟುಗಳು, ತಮ್ಮ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಗುರುವಾರ ಹೇಳಿದ್ದಾರೆ.

ಅಪ್ರಾಪ್ತೆ ಸೇರಿ ಏಳು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಏಪ್ರಿಲ್ 23ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೊಲೆರೊ-ಟ್ರಕ್‌ ಭೀಕರ ರಸ್ತೆ ಅಪಘಾತ: ಮದುವೆಗೆ ತೆರಳುತ್ತಿದ್ದ ಒಂದೇ ಕುಟುಂಬದ 11 ಜನ ಸಾವು!

ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ- ಸಾಕ್ಷಿ ಮಲಿಕ್:ಆದ್ರು ಕೂಡಾ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ ಮೂವರು ಮಹಿಳಾ ಕುಸ್ತಿಪಟುಗಳ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮುಕ್ತಾಯಗೊಳಿಸಿತು. ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಏಳು ಜನ ದೂರುದಾರರಿಗೆ ಸಾಕಷ್ಟು ಭದ್ರತೆಯನ್ನು ಒದಗಿಸಲಾಗಿದೆ. ''ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುತ್ತೇವೆ. ಜೊತೆಗೆ ಪ್ರತಿಭಟನೆ ಮುಂದುವರಿಯುತ್ತದೆ" ಎಂದು ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಹೇಳಿದ್ದಾರೆ.

ಇದನ್ನೂ ಓದಿ:24 ಗಂಟೆ ಅವಧಿಯಲ್ಲಿ 2ನೇ ಎನ್​ಕೌಂಟರ್​: ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರ ಹತ್ಯೆ

ಹಿರಿಯರೊಂದಿಗೆ ಸಮಾಲೋಚಿಸಿದ ಬಳಿಕ ನಿರ್ಧಾರ ಕೈಗೊಳ್ಳುತ್ತೇವೆ- ಕುಸ್ತಿಪಟುಗಳು: "ಸುಪ್ರೀಂ ಕೋರ್ಟ್ ಆದೇಶವು ಹಿನ್ನಡೆಯಲ್ಲ, ಈ ವಿಷಯದಲ್ಲಿ ಏನು ಮಾಡಬಹುದೋ ಅದನ್ನು ಮಾಡಿದೆ. ಮುಂದಿನ ಕ್ರಮವನ್ನು ಹಿರಿಯರೊಂದಿಗೆ ಸಮಾಲೋಚಿಸಿದ ನಂತರ ನಿರ್ಧರಿಸಲಾಗುವುದು'' ಎಂದು ಕುಸ್ತಿಪಟುಗಳು ತಿಳಿಸಿದ್ದಾರೆ. "ನಾವು ಎಲ್ಲಾ ಆಯ್ಕೆಗಳನ್ನು ಗಮನಿಸಿದ್ದೇವೆ. ಹಿರಿಯರನ್ನು ಸಂಪರ್ಕಿಸಿದ ನಂತರ ಮುಂದಿನ ನಿರ್ಧರ ಕೈಗೊಳ್ಳಲಿದ್ದೇವೆ'' ಎಂದು ವಿನೇಶ್ ಫೋಗಟ್ ಹೇಳಿದರು.

ಇದನ್ನೂ ಓದಿ:ಕಾರಿನ ಮೇಲೆ ಟ್ಯಾಂಕರ್ ಪಲ್ಟಿ.. ಮೂವರು ಮಕ್ಕಳು ಸೇರಿ 9 ಮಂದಿ ಸಾವು

ಸುಪ್ರೀಂ ಕೋರ್ಟ್​ ಹೇಳಿದ್ದೇನು?:ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಕುಸ್ತಿಪಟುಗಳನ್ನು ಪ್ರತಿನಿಧಿಸುವ ವಕೀಲರ ಮೌಖಿಕ ಮನವಿಯನ್ನು ಸ್ವೀಕರಿಸಲು ನಿರಾಕರಿಸಿತು. ನಡೆಯುತ್ತಿರುವ ತನಿಖೆಯನ್ನು ನಿವೃತ್ತ ಅಥವಾ ಸೇವೆಯಲ್ಲಿರುವ ಹೈಕೋರ್ಟ್ ನ್ಯಾಯಾಧೀಶರು ಮೇಲ್ವಿಚಾರಣೆ ಮಾಡುತ್ತಾರೆ. ನೀವು ಎಫ್‌ಐಆರ್ ನೋಂದಣಿ ಮತ್ತು ದೂರುದಾರರಿಗೆ ಭದ್ರತೆಗಾಗಿ ನಿರ್ದಿಷ್ಟ ಪ್ರಾರ್ಥನೆಯೊಂದಿಗೆ ಇಲ್ಲಿಗೆ ಬಂದಿದ್ದೀರಿ. ಈಗ ನಿಮ್ಮ ಎರಡೂ ಮನವಿಗಳನ್ನು ಪರಿಹರಿಸಲಾಗಿದೆ. ನಿಮಗೆ ಯಾವುದೇ ಕುಂದುಕೊರತೆಗಳಿದ್ದರೆ, ನೀವು ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದು" ಎಂದು ನ್ಯಾಯ ಪೀಠ ಹೇಳಿದೆ. ಸದ್ಯಕ್ಕೆ ವಿಚಾರಣೆಯನ್ನು ಮುಕ್ತಾಯಗೊಳಿಸುತ್ತಿದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಮಾಸ್ಟರ್ ಮೈಂಡ್​ಗಳ ವಿರುದ್ಧ NIA ಚಾರ್ಜ್​ಶೀಟ್ ಸಲ್ಲಿಕೆ

ಇದನ್ನೂ ಓದಿ:10 ಸಾವಿರ ರೂಪಾಯಿಗಾಗಿ ಜಗಳ.. ಹೈಕೋರ್ಟ್​ ಬಳಿ ಬರ್ಬರ ಕೊಲೆ

ABOUT THE AUTHOR

...view details