ಕರ್ನಾಟಕ

karnataka

ಭ್ರಷ್ಟ ಸರ್ಕಾರವನ್ನು ತೊಲಗಿಸಬೇಕು: ಬಾಗಲಕೋಟೆಯಲ್ಲಿ ಬಸವರಾಜ ರಾಯರೆಡ್ಡಿ ಕರೆ

By

Published : Jan 9, 2023, 6:06 PM IST

Updated : Jan 9, 2023, 9:10 PM IST

ಭ್ರಷ್ಟಾಚಾರದಿಂದ ವ್ಯವಸ್ಥೆ ಹದಗೆಟ್ಟಿದೆ - ಎಲ್ಲ ರಾಜಕೀಯ ಪಕ್ಷಗಳು ಹಾಳಾಗಿದ್ದು, ಅತ್ಮಾವಲೋಕನ ಮಾಡಿಕೊಳ್ಳಬೇಕು - ಜನವರಿ 11 ರಿಂದ 'ಪ್ರಜಾಧ್ವನಿ' ಅಭಿಯಾನಕ್ಕೆ ಚಾಲನೆ.

corrupt-government-should-be-done-away-with-basavaraja-rayareddy
ಭ್ರಷ್ಟ ಸರ್ಕಾರವನ್ನು ತೊಲಗಿಸಬೇಕು: ಬಸವರಾಜ ರಾಯರೆಡ್ಡಿ

ಬಾಗಲಕೋಟೆ - ಭ್ರಷ್ಟ ಸರ್ಕಾರವನ್ನು ತೊಲಗಿಸಬೇಕು: ಬಸವರಾಜ ರಾಯರೆಡ್ಡಿ ಕರೆ

ಬಾಗಲಕೋಟೆ:ಜನತೆಯ ಹಿತ ದೃಷ್ಠಿಯಿಂದ ಬಿಜೆಪಿಯ ಭ್ರಷ್ಟ ಸರ್ಕಾರವನ್ನು ತೊಲಗಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಬಾಗಲಕೋಟೆ ನವನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಆವರು, ಬಿಜೆಪಿ ಪಕ್ಷದ ಭ್ರಷ್ಟಾಚಾರದಿಂದ ರಾಜಕೀಯ ವ್ಯವಸ್ಥೆ ಹದಗೆಟ್ಟು ಹೋಗಿದೆ. ಇತ್ತೀಚಿನ ದಿನಮಾನಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳ ವ್ಯವಸ್ಥೆ ಹಾಳಾಗಿದ್ದು, ಎಲ್ಲ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಮ್ಮ ದೇಶದಲ್ಲಿ ನಿರ್ಮಾಣವಾಗಿದೆ ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

ಬಿಜೆಪಿ ಪಕ್ಷದ ಮುಖಂಡರು, ನೀತಿವಂತರು, ತತ್ವ ಸಿದ್ದಾಂತ ಎಂದು ಹೇಳಿಕೊಂಡು ಓಡಾಡುತ್ತಾರೆ. ಅವರು ಬರೀ ಮಾತಿನಲ್ಲಿ ಮಾತ್ರ ಇದ್ದಾರೆ ಹೊರತು, ಅವರಷ್ಟು ಭ್ರಷ್ಟರು ಮತ್ತು ಕೆಟ್ಟ ಗುಣಗಳನ್ನು ಹೊಂದಿದ್ದಾರೆ ಹಾಗೂ ಲಜ್ಜೆ ಗೆಟ್ಟು ರಾಜಕಾರಣ ಮಾಡುತ್ತಿದ್ದಾರೆ. ಇಂತಹ ಭ್ರಷ್ಟ ರಾಜಕೀಯ ವ್ಯವಸ್ಥೆಯನ್ನ ಜನರ ಹಿತಕ್ಕಾಗಿ ಅಧಿಕಾರದಿಂದ ಕೆಳಗಿಳಸಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರದಿಂದ ರೋಸಿ ಹೋಗಿರುವ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ಹೊಂದಿದ್ದಾರೆ, ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಜಾಧ್ವನಿ ಎಂಬ ಅಭಿಯಾನ ಆರಂಭವಾಗಿದೆ. ಜನವರಿ 11 ರಿಂದ ಆರಂಭವಾಗಲಿರುವ ಈ ಪ್ರಜಾಧ್ವನಿ ಅಭಿಯಾನ ಯಶಸ್ಸು ಗೊಳಿಸುವ ನಿಟ್ಟಿನಲ್ಲಿ ಪಕ್ಷದ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ತೊಲಗಿಸಿ ಎಂಬ ಘೋಷವಾಕ್ಯ: ಬೆಳಗಾವಿಯ ತಿಲಕ್​ ವಾಡಿಯಿಂದ ಆರಂಭವಾಗಲಿರುವ, ಈ ಪ್ರಜಾದ್ವನಿ ಅಭಿಯಾನ, ಬಸ್ ಮೂಲಕ ಯಾತ್ರೆ ಹೊರಡಲಿದ್ದು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಿಂದೆ ಬೆಳಗಾವಿಗೆ ಮಹಾತ್ಮಾ ಗಾಂಧಿಜೀ ಅವರು ಭೇಟಿ ಕೊಟ್ಟ ಸ್ಥಳದಿಂದ ‘ಪ್ರಜಾಧ್ವನಿ’ ಅಭಿಯಾನ ಆರಂಭವಾಗಲಿದೆ. ಅಂದು ಬ್ರಿಟಿಷ್​ರನ್ನ ಭಾರತ ಬಿಟ್ಟು ತೊಲಗಿ ಎಂಬ ಘೋಷವಾಕ್ಯದಿಂದ ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರನ್ನು ಭಾರತ ಬಿಟ್ಟು ತೊಲಗುವಂತೆ ಮಾಡಿದ್ದರು, ಈಗ ಬಿಜೆಪಿ ತೊಲಗಿಸಿ ಎಂಬ ಘೋಷವಾಕ್ಯದಿಂದ ಪ್ರಜಾಧ್ವನಿ ಅಭಿಯಾನ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದರು.

ಜನವರಿ 18 ರಂದು ಕಾಂಗ್ರೆಸ್​ ಪಕ್ಷದ ವತಿಯಿಂದ ಬಾಗಲಕೋಟೆ ನಗರದಲ್ಲಿ ಬೃಹತ್​ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಹಾಗೂ ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಪ್ರದರ್ಶಿಸಲು ಬಾಗಲಕೋಟೆಯ ನವನಗರದ ಕಾಳಿದಾಸ ವೃತ್ತದಲ್ಲಿ ಸಮಾವೇಶ ಮಾಡಲು ನಿರ್ಧರಿಸಲಾಗಿದೆ ಎಂದು ಮಾಜಿ ಶಾಸಕ ಬಸವರಾಜ ರಾಯರೆಡ್ಡಿ ತಿಳಿಸಿದರು.

ರಾಜ್ಯಾದ್ಯಂತ ಬಸ್​ ಯಾತ್ರೆ: 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್​ ನಾಯಕರು ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ವಿವಿಧ ಹಂತದಲ್ಲಿ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡಿದ್ದಾರೆ. ಜನವರಿ 11 ರಿಂದ ಕಾಂಗ್ರೆಸ್​ ನಾಯಕರು ರಾಜ್ಯಾದ್ಯಂತ ಬಸ್​ ಯಾತ್ರೆ ಆರಂಭಿಸಿಲಿದ್ದಾರೆ. ಈ ಪ್ರವಾಸವು ಎರಡು ಹಂತಗಳಲ್ಲಿ ನಡೆಯಲಿದ್ದು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಎಂದು ವಿಭಾಗಿಸಿ ಕಾಂಗ್ರೆಸ್​ ಪಕ್ಷದ ಪ್ರಮುಖ ನಾಯಕರ ನೇತೃತ್ವದಲ್ಲಿ ಯಾತ್ರೆ ಕೈಗೊಂಡು ರಾಜ್ಯದ ಜನತೆಯ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್​ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ:ಕೋಲಾರದಿಂದಲೇ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ ಸಿದ್ದರಾಮಯ್ಯ!

Last Updated :Jan 9, 2023, 9:10 PM IST

ABOUT THE AUTHOR

...view details