ಕರ್ನಾಟಕ

karnataka

ಬಾಗಲಕೋಟೆ: ಬ್ಯಾಂಕ್ ಮ್ಯಾನೇಜರ್ ಮತ್ತು ಪತ್ನಿ ಮೇಲೆ ಹಲ್ಲೆ ನಡೆಸಿದ ದರೋಡೆಕೋರರು

By

Published : Aug 4, 2021, 8:50 PM IST

ಬಾಗಲಕೋಟೆಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಮತ್ತು ಅವರ ಪತ್ನಿ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ದಂಪತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ದಾಖಲಾಗಿದೆ.

Gangsters has Assault
ದರೋಡೆಕೋರರ ಹಲ್ಲೆ

ಬಾಗಲಕೋಟೆ:ದರೋಡೆಕೋರರು ಬ್ಯಾಂಕ್ ಮ್ಯಾನೇಜರ್ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ಬೆಲೆ ಬಾಳುವ ಚಿನ್ನಾಭರಣ, ನಗದನ್ನು ದರೋಡೆ ಮಾಡಿರುವ ಘಟನೆ ತಾಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆಯಲ್ಲಿ ಬ್ಯಾಂಕ್​ ಮ್ಯಾನೇಜರ್​ ಮೇಲೆ ಹಲ್ಲೆ ನಡೆಸಿದ ದರೋಡೆಕೋರರು

ನಿನ್ನೆ ರಾತ್ರಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ದೇವಿದಾಸ್ ಮತ್ತು ಅವರ ಪತ್ನಿ ಸ್ವಾತಿ ಎಂಬುವವರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದು, ಮನೆಯಲ್ಲಿದ್ದ ಚಿನ್ನಾಭರಣ, ಹಣವನ್ನು ದೋಚಿ ಪರಾರಿಯಾಗಿದ್ದಾರೆ. ದಂಪತಿ ಹೊನ್ನಾವರ ಮೂಲದವರಾಗಿದ್ದು, ಕೆಲಸ ಸಂಬಂಧ ಜಿಲ್ಲೆಯಲ್ಲಿ ನಲೆಸಿದ್ದರು. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ದಂಪತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೊಳಗಾದ ದಂಪತಿ

ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಶ್ವಾನದಳದ ಮೂಲಕ ಪರಿಶೀಲನೆ ನಡೆಸಿದ್ದಾರೆ. ಕಲಾದಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ. ದುಷ್ಕರ್ಮಿಗಳಿಗೆ ಎಲ್ಲೆ ಇರಲಿ, ತನಿಖೆ ನಡೆಸಿ ಬಂಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ತಿಳಿಸಿದ್ದಾರೆ.

ABOUT THE AUTHOR

...view details