ಕರ್ನಾಟಕ

karnataka

ಒಂದೇ ತಿಂಗಳಲ್ಲಿ 30ಕ್ಕೂ ಹೆಚ್ಚು ಕಡೆ ಕಳ್ಳತನ: ರಬಕವಿ-ಬನಹಟ್ಟಿ ಜನರ ನಿದ್ದೆಗೆಡಿಸಿದ ಖದೀಮರು

By

Published : Jan 24, 2021, 10:03 AM IST

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಕಳೆದ ಒಂದು ತಿಂಗಳಿಂದ ಎಂಟು ಜನರ ಗುಂಪೊಂದು ನಿರಂತರವಾಗಿ ಮನೆ, ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಈ ಕುರಿತು ಹಿರಿಯ ಅಧಿಕಾರಿಗಳು ಗಮನ ಹರಿಸಿ, ಕಳ್ಳರನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

theft
ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಕಳ್ಳರ ಹಾವಳಿ ಮಿತಿ ಮೀರಿದೆ. ಒಂದೇ ತಿಂಗಳಲ್ಲಿ 30ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಳೆದ ಒಂದು ತಿಂಗಳಿಂದ ಎಂಟು ಜನರ ಗುಂಪೊಂದು ನಿರಂತರವಾಗಿ ಮನೆ, ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದು, ಪೊಲೀಸರು ಮಾತ್ರ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಖದೀಮರು ನಡೆಸಿರುವ ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರಾತ್ರಿ ವೇಳೆ ಕಳ್ಳರು ಗಲ್ಲಿ ಗಲ್ಲಿ ತಿರುಗುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದ್ದು, ಈ ಕುರಿತು ಹಿರಿಯ ಅಧಿಕಾರಿಗಳು ಗಮನ ಹರಿಸಿ, ಕಳ್ಳರನ್ನು ಬಂಧಿಸಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

ABOUT THE AUTHOR

...view details