ಕರ್ನಾಟಕ

karnataka

ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಮುಂದೂಡಿಕೆ

By

Published : Aug 5, 2021, 7:13 AM IST

ಕೊರೊನಾ ಮೂರನೇ ಅಲೆ ಭೀತಿಯಿಂದಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯಬೇಕಿದ್ದ ಸಪ್ತಪದಿ ಸಾಮೂಹಿಕ ವಿವಾಹ ಮಹೋತ್ಸವವನ್ನು ಮುಂದೂಡಲಾಗಿದೆ.

ghati subramanya temple
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ

ದೊಡ್ಡಬಳ್ಳಾಪುರ: ಕೊರೊನಾ ಮೂರನೇ ಅಲೆಯ ಭೀತಿಯಿಂದಾಗಿ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 13 ಮತ್ತು ಸೆಪ್ಟೆಂಬರ್ 13ರಂದು ನಿಗದಿಯಾಗಿದ್ದ ಸಪ್ತಪದಿ ಸಾಮೂಹಿಕ ವಿವಾಹ ಮಹೋತ್ಸವವನ್ನು ಜಿಲ್ಲಾಡಳಿತ ಮುಂದೂಡಿದೆ.

ಜಿಲ್ಲಾಧಿಕಾರದ ಆದೇಶ ಪ್ರತಿ

ಬಡವರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಅದರಂತೆ ಘಾಟಿ ಸುಬ್ರಹ್ಮಣ್ಯದಲ್ಲಿ ಇದೇ ತಿಂಗಳ 13 ಮತ್ತು ಸೆಪ್ಟೆಂಬರ್ 13ರಂದು ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಿಗದಿ ಮಾಡಲಾಗಿತ್ತು. ಮದುವೆಗಾಗಿ 66 ಅರ್ಜಿಗಳು ಬಂದಿದ್ದವು. ಈ ಪೈಕಿ 27 ಜೋಡಿಗಳ ಅರ್ಜಿಗಳು ಮಾತ್ರ ವಿವಾಹಕ್ಕೆ ಅರ್ಹವಾಗಿದ್ದು, ಆಗಸ್ಟ್ 6ರಂದು ಜೋಡಿಗಳ ಪಟ್ಟಿ ಬಿಡುಗಡೆಯಾಗಬೇಕಿತ್ತು.

ಆದರೆ ದೇಶದ್ಯಾಂತ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:ಜಾತ್ರೆಗೆ ಬಂದಿದ್ದ ಮಹಿಳೆಯರಿಗೆ ಬಳೆ ಕೊಡಿಸಿ, ತೊಡಿಸಿದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್‌

ABOUT THE AUTHOR

...view details